ಹಾವೇರಿ: ದೆಹಲಿ ರೈತರ ಪ್ರತಿಭಟನೆ ಬೆಂಬಲಿಸಿ ಹಾವೇರಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘಟನೆ ಪ್ರತಿಭಟನೆ ನಡೆಸಿತು.
ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೆಲಕಾಲ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಕೂಡಲೇ ರೈತ ವಿರೋಧಿ ನೀತಿಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಸೇರಿದಂತೆ ವಿವಿಧ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಾರ್ ಕೋಲು ಬಾರಿಸಿ ಅಡ್ಡಲಾಗಿ ಮಲಗಿ ಬಂಡಿಗಳನ್ನ ರಸ್ತೆಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆಯನ್ನು ಹಿಂದೆ ಪಡೆಯದ ಕಾರಣ ಪೊಲೀಸರು ರೈತರನ್ನ ವಶಕ್ಕೆ ಪಡೆದರು. ಸುಮಾರು 15ಕ್ಕೂ ರೈತರನ್ನ ವಶಕ್ಕೆ ಪಡೆದ ನಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ವಾಹನಗಳ ಸಂಚಾರ ಆರಂಭವಾಯಿತು.