ರಾಣೆಬೆನ್ನೂರು (ಹಾವೇರಿ): ಮೂರು ವರ್ಷಗಳಲ್ಲಿ ಮೂರನೇ ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಆರ್.ಶಂಕರ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
ಫೆಬ್ರುವರಿ 1,1965ರಲ್ಲಿ ರಾಮಚಂದ್ರಪ್ಪನವರ ಪುತ್ರರಾಗಿ ಬೆಂಗಳೂರಲ್ಲಿ ಜನಸಿದರು. ಬಳಿಕ ಬೆಂಗಳೂರಿನಿಂದ ರಾಣೆಬೆನ್ನೂರು ನಗರಕ್ಕೆ ಆಗಮಿಸಿ ಸಕ್ರಿಯ ರಾಜಕೀಯದಲ್ಲಿ ತೊಡಗಿದರು. ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡಿ ನಂತರ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ನಿರತರಾದರು.
ಬಳಿಕ 2008ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧೆ ಮಾಡಿ ಜಯದಾಖಲಿಸಿ ಉಪಮೇಯರ್ ಸ್ಥಾನ ಅಲಂಕರಿಸಿದರು. 2013ರಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಮಾಜಿ ಸಚಿವ ಕೆ.ಬಿ. ಕೋಳಿವಾಡ ವಿರುದ್ಧ ಸ್ಪರ್ಧಿಸಿ ಸೋಲುಕಂಡರು.
2018ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕೆಪಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ವಿರುದ್ಧ ಮೊದಲ ಬಾರಿಗೆ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾದರು.
ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಪರಿಸರ ಮತ್ತು ಅರಣ್ಯ ಮತ್ತು ಪೌರಾಡಳಿತ ಸಚಿವರಾಗಿ ಕೆಲಸ ಮಾಡಿದರು. ಬದಲಾದ ರಾಜಕೀಯದಲ್ಲಿ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಿಜೆಪಿ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಈಗ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಅರುಣ್ ಸಿಂಗ್ ಜೊತೆಗಿನ ಮಾತುಕತೆ ಫಲಪ್ರದ: ಸಮಾಧಾನಗೊಂಡ ರೇಣುಕಾಚಾರ್ಯ