ರಾಣೆಬೆನ್ನೂರು: ರಾಣೆಬೆನ್ನೂರು ಕ್ಷೇತ್ರಕ್ಕೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಬಸನಗೌಡ ಕೋಟೂರ ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಅವರು, ನವೆಂಬರ್ 11 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ನವೆಂಬರ್18 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನವೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ, 21ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, 9ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಒಟ್ಟು 2,32,485 ಮತದಾರರಿದ್ದು, 1,18,396 ಪುರುಷರು, 1,14,076 ಮಹಿಳಾ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.