ETV Bharat / state

ರಾಣೆಬೆನ್ನೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ದಿನಾಂಕ ಘೋಷಣೆ

ರಾಣೆಬೆನ್ನೂರು ನಗರಸಭೆಯ ಸದಸ್ಯರಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಚುನಾವಣೆ ನವೆಂಬರ್​ 1 ರಂದು ನಡೆಯಲಿದೆ. ಈ ನಿಟ್ಟಿನಲ್ಲಿ 35 ಸದಸ್ಯರಿಗೆ ನೋಟಿಸ್ ನೀಡಲಾಗಿದೆ.

Ranebennur Municipal Council President-Vice-President Election Date Announced
ರಾಣೆಬೆನ್ನೂರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ದಿನಾಂಕ ಘೋಷಣೆ
author img

By

Published : Oct 25, 2020, 9:39 AM IST

ರಾಣೆಬೆನ್ನೂರು: ಇಲ್ಲಿನ ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ನವೆಂಬರ್​ 1ರಂದು ಚುನಾವಣೆ ನಿಗದಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಸಲು ಹಾವೇರಿಯ ಉಪವಿಭಾಗಾಧಿಕಾರಿಗಳನ್ನು ಚುನಾವಣಾಧಿಕಾರಿಯನ್ನಾಗಿ ನಿಯೋಜಿಸಿದ್ದಾರೆ. ನಗರಸಭೆಯ ಸದಸ್ಯರಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಚುನಾವಣೆಯ ಸಭೆಯನ್ನು ನವೆಂಬರ್​ 1 ರಂದು ಕರೆಯಲಾಗಿದೆ. ಈಗಾಗಲೇ ಸಭೆಗೆ ಹಾಜರಾಗುವಂತೆ 35 ಸದಸ್ಯರಿಗೆ ನೋಟಿಸ್ ನೀಡಲಾಗಿದೆ.

ಆದೇಶ ಪ್ರತಿ
ಆದೇಶ ಪ್ರತಿ

ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಜಿದ್ದಾಜಿದ್ದಿ: ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್, ಬಿಜೆಪಿ ಹಾಗೂ ಕೆಪಿಜೆಪಿ ಸದಸ್ಯರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರು ತೆರೆ ಮರೆಯ ಕಸರತ್ತು ಮಾಡುತ್ತಿದ್ದಾರೆ. ಇತ್ತ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಯಾ ಮೀಸಲಾತಿ ವ್ಯಾಪ್ತಿಯ ನಗರಸಭಾ ಸದಸ್ಯರು ಅಧಿಕಾರದ ಗದ್ದುಗೆ ಏರಲು ಲಾಬಿ ಆರಂಭಿಸಿದ್ದಾರೆ.

ಮಹಿಳೆಯರ ಕಾರುಬಾರ: ನಗರಸಭೆ ಅಧ್ಯಕ್ಷ ಬಿಸಿಎ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಾಗಿದೆ. ಒಟ್ಟಿನಲ್ಲಿ ಯಾರೇ ಆದರೂ ಮಹಿಳಾ ಮಣಿಗಳೆ ಈ ಬಾರಿ ನಗರಸಭಾ ಗದ್ದುಗೆ ಹಿಡಿಯುತ್ತಾರೆ ಎಂಬುದು ವಿಶೇಷ.

For All Latest Updates

TAGGED:

Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.