ರಾಣೆಬೆನ್ನೂರು: ಕೊರೊನಾ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿದ ಕಾರಣ ಈಗ ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.
ತಾಲೂಕಿನ ಒಟ್ಟು 40 ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ 33 ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಗಿದಿದೆ. ಸದ್ಯ ಹೊಸ ಸದಸ್ಯರನ್ನು ಚುನಾಯಿಸಲು ಕಾಲಾವಕಾಶ ಬೇಕಾದ ಕಾರಣ ಅವಧಿ ಮುಗಿದ ಪಂಚಾಯಿತಿಗೆ ಅತ್ಯಗತ್ಯ ಕೆಲಸ ನಿರ್ವಹಿಸಲು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣದ ಮೂಲಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇನ್ನು ಎ ಮತ್ತು ಬಿ ಅಧಿಕಾರಿಗಳ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಆಡಳಿತಾಧಿಕಾರಿಗೆ ಮೂರರಿಂದ-ನಾಲ್ಕು ಪಂಚಾಯಿತಿ ಹಂಚಿಕೆ ಮಾಡಲಾಗಿದೆ ಎಂದರು.