ಹಾವೇರಿ: ಕೋವಿಡ್ ಆಸ್ಪತ್ರೆಯಿಂದ ಇಂದು ಮತ್ತೊಬ್ಬ ಬಿಡುಗಡೆಯಾಗಲಿದ್ದಾನೆ. ಮುಂಬೈಯಿಂದ ಜಿಲ್ಲೆಗೆ ಮೊದಲ ಕೊರೊನಾ ಹೊತ್ತು ತಂದ ವ್ಯಕ್ತಿ ಮಂಗಳವಾರ ಬಿಡುಗಡೆಯಾಗಲಿದ್ದಾನೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಂದ್ರ ದೊಡ್ಮನಿ ತಿಳಿಸಿದ್ದಾರೆ.
ಪಿ-639 ಬಗ್ಗೆ ಈಗಾಗಲೇ ವೈದ್ಯಕೀಯವಾಗಿ ಅಧ್ಯಯನ ಮಾಡಲಾಗಿದೆ. ಅಲ್ಲದೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದ್ದು, ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗುತ್ತಿದೆ ಎಂದು ಡಾ. ರಾಜೇಂದ್ರ ತಿಳಿಸಿದರು.
ಅಲ್ಲದೆ ಬಿಡುಗಡೆಯಾದ ನಂತರ 14 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್‌ನಲ್ಲಿ ಇರುವಂತೆ ತಿಳಿಸಲಾಗುತ್ತಿದೆ. ಹಾವೇರಿ ಕೋವಿಡ್ ಆಸ್ಪತ್ರೆ ಸಿಬ್ಬಂದಿ ಸಹಕಾರದಿಂದ ಕೊರೊನಾ ಪಾಸಿಟಿವ್ ರೋಗಿಗಳು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಡಾ. ರಾಜೇಂದ್ರ ತಿಳಿಸಿದರು.