ಹಾವೇರಿ: ನಗರದ ಹೊರವಲಯದಲ್ಲಿರುವ ವಾಯುವ್ಯ ಸಾರಿಗೆ ಘಟಕದ ಡಿಪೋ ಬಳಿ ಇರುವ ಹೋಟೆಲ್ ಒಂದರಲ್ಲಿ ಸಾರಿಗೆ ಸಂಸ್ಥೆಯ ನಿವೃತ್ತ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಶಿವಪ್ರಕಾಶ ಹೂಗಾರ(62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಿವಪ್ರಕಾಶ ಹಾವೇರಿ ಡಿಪೋದಲ್ಲಿ ಡ್ರೈವರ್ ಆಗಿ ಕೆಲಸ ಮಾಡಿ ಹದಿನೈದು ತಿಂಗಳ ಹಿಂದಷ್ಟೇ ನಿವೃತ್ತರಾಗಿದ್ದರು. ನಿವೃತ್ತರಾದ ನಂತರ ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಬಾರದ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.