ಹಾವೇರಿ: ಇದೇ 11ರಂದು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಇಂದು ಗಣವೇಷಧಾರಿಗಳಿಂದ ಪಥಸಂಚಲನ ನಡೆಯಿತು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಪಥಸಂಚಲನ ಆರಂಭಗೊಂಡಿತು. ಪಥಸಂಚಲನದಲ್ಲಿ ಸಾವಿರಾರು ಆರ್ಎಸ್ಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಥಸಂಚಲನದಲ್ಲಿ ಆರ್ಎಸ್ಎಸ್ ಗಣವೇಷಧಾರಿಗಳ ಮೇಲೆ ಪುಷ್ಪ ಮಳೆ ಸುರಿಸಲಾಯಿತು. ಪಥಸಂಚಲನದ ಹಿನ್ನೆಲೆಯಲ್ಲಿ ನಗರದಲ್ಲಿನ ರಸ್ತೆಗಳಲ್ಲಿ ಬಣ್ಣಬಣ್ಣದ ರಂಗೋಲಿಗಳ ಚಿತ್ತಾರ ಮೂಡಿಸಿ, ಮಹಿಳೆಯರು ಸ್ವಾಗತಿಸಿದರು.
ಹಾವೇರಿ, ಧಾರವಾಡ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಪಥಸಂಚಲನದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪಥಸಂಚಲನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗಮಿಸಿದ್ದರು.
ಇದನ್ನೂ ಓದಿ: ಗಣವೇಷಧಾರಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ