ETV Bharat / state

ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ... ಸಾಲಮನ್ನಾಕ್ಕೆ ಒತ್ತಾಯಿಸಿದ ರೈತರ ಬಂಧನ - ಹಾವೇರಿ ಸುದ್ದಿ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಮತ್ತು ಹಿರೇಕಾಂಶಿ ಕೆರೆ ತುಂಬಿಸುವ ನೂತನ ಯೋಜನೆಗಳಿಗೆ ಅಡಿಗಲ್ಲು ಹಾಕುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಕೆಲ ರೈತರನ್ನು ಪೊಲೀಸರು ಬಂಧಿಸಿದ್ದಾರೆ.

run-by-cm-for-the-project-of-filling-water-from-the-varada-river-to-the-lakes

author img

By

Published : Feb 24, 2020, 7:36 PM IST

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಮತ್ತು ಹಿರೇಕಾಂಶಿ ಕೆರೆ ತುಂಬಿಸುವ ನೂತನ ಯೋಜನೆಗಳಿಗೆ ಅಡಿಗಲ್ಲು ಹಾಕುವ ಮೂಲಕ ಸಿ.ಎಂ. ಯಡಿಯೂರಪ್ಪ ಚಾಲನೆ ನೀಡಿದರು.

ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ.

ವರದಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ರಿಮೋಟ್​ ಒತ್ತುವ ಮೂಲಕ ಯೋಜನೆಗೆ ಸಿ.ಎಂ ಚಾಲನೆ ನೀಡಿದ್ದು, ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್​ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಸಾಥ್​ ನೀಡಿದರು.

ಇದೇ ಸಂದರ್ಭದಲ್ಲಿ ಸಾಲಮನ್ನಾ ಹಾಗೂ ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಮನವಿ ನೀಡಲು ಆಗಮಿಸಿದ ರೈತರನ್ನ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. 20ಕ್ಕೂ ಅಧಿಕ ರೈತರನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ರೈತರಿಗೆ ಸಾಲಮನ್ನಾ ಯೋಜನೆ, ರೈತರಿಗೆ ಹೊಸಸಾಲವನ್ನ ಬ್ಯಾಂಕ್​ನಲ್ಲಿ ನೀಡುತ್ತಿಲ್ಲ. ಬೆಳೆವಿಮೆ ಹಾಗೂ ಪರಿಹಾರ ಸಿಕ್ಕಿಲ್ಲವೆಂದು ಕೆಲ ರೈತರು ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.