ETV Bharat / state

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲಲಿದೆ: ಸಲೀಂ ಅಹ್ಮದ್ - ಈಟಿವಿ ಭಾರತ ಕರ್ನಾಟಕ

ಬಿಜೆಪಿ ಸರ್ಕಾರ ಮಾಡಿದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.

Etv Bharatsalim-ahmed-reaction-on-bjp
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ: ಸಲೀಂ ಅಹ್ಮದ್
author img

By

Published : Jun 12, 2023, 10:26 PM IST

Updated : Jun 12, 2023, 11:03 PM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು. ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗುತ್ತಿದೆ. ಜನ ಬಿಜೆಪಿಯಿಂದ ಭ್ರಮನಿರಸನರಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗದಂತಹ ಕೇಂದ್ರ ಸರ್ಕಾರದ ತಪ್ಪುಗಳನ್ನು ಮತದಾರರಿಗೆ ತಲುಪಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಮಾಡಿದ ಭ್ರಷ್ಟಾಚಾರಗಳನ್ನು ತನಿಖೆ ಮಾಡಿಸುತ್ತೇವೆ. ಸರ್ಕಾರ ಬಂದು ಇನ್ನೂ 30 ದಿನ ಆಗಿಲ್ಲ, ನಮಗೆ ಸ್ವಲ್ಪ ಸಮಯ ನೀಡಿ. ತಪ್ಪು ಮಾಡಿದವರ ಮೇಲೆ ಕ್ರಮ ಜರುಗಿಸುತ್ತೇವೆ. ಕಾಂಗ್ರೆಸ್ ಪಕ್ಷ ಯಾವತ್ತೂ ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಪಕ್ಷದ ಶಕ್ತಿಯಿಂದ ವಿಧಾನಸಭೆಯ 135 ಸ್ಥಾನ ಗೆದ್ದಿದ್ದೇವೆ. ಇನ್ನೂ 15 ಸ್ಥಾನ ಬರಬೇಕಾಗಿತ್ತು. ಕಾಂಗ್ರೆಸ್ ಸಿದ್ಧಾಂತ, ವಿಚಾರಧಾರೆ ಹಾಗೂ ಕಾರ್ಯಕ್ರಮಗಳ ಮೇಲೆ ನಾವು ಮತ ಕೇಳಿದ್ದೇವು ಎಂದು ಹೇಳಿದರು.

ಮೂರು ವರ್ಷಗಳ ಕಾಲ ಬಿಜೆಪಿ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮತದಾರರ ಮನೆ ಮನೆಗೆ ಹೋಗಿ ನಾವು ಹೇಳಿದ್ದೇವೆ. ಬಿಜೆಪಿ ಸರ್ಕಾರದಿಂದ ಭ್ರಮನಿರಸನರಾಗಿದ್ದ ಜನರು ಕಾಂಗ್ರೆಸ್ ಕಾರ್ಯಗಳಿಗೆ ಆಶೀರ್ವಾದ ಮಾಡಿದ್ದಾರೆ. ಜನರಿಗೆ ನಾವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂಬ ವಿಶ್ವಾಸವಿದೆ. ಮೊದಲನೇ ಗ್ಯಾರಂಟಿ ಯೋಜನೆಯನ್ನ ನಾವು ಜಾರಿಗೆ ಮಾಡಿದ್ದೇವೆ. ಇದನ್ನ ದೇಶದಲ್ಲಿನ ಜನ ಸ್ವಾಗತ ಮಾಡಿದ್ದಾರೆ. ಇದು ಮಹಿಳೆಯರಿಗೆ ನೀಡಿದ ದೊಡ್ಡ ಶಕ್ತಿಯಾಗಿದೆ. ಇನ್ನುಳಿದ ನಾಲ್ಕು ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತದೆ. ಬಿಜೆಪಿ ಪಕ್ಷ ಟೀಕೆ ಮಾಡುವದನ್ನ ಬಿಟ್ಟು ಸ್ವಲ್ಪ ಕಾಯಲಿ, ನಮ್ಮ ಕಾರ್ಯಗಳಿಗೆ ಬೆಂಬಲ ನೀಡಲಿ. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಯಾವುದೇ ಜನಪರ ಕಾರ್ಯಗಳಿಗೆ ನಾವು ತಡೆ ಹಾಕುವದಿಲ್ಲ. ಆದರೆ ಜನಪರ ಕಾರ್ಯಕೊಟ್ಟು ಅದರಲ್ಲಿ ಅವ್ಯವಹಾರ ಮಾಡಿದ್ದರೆ ಅದನ್ನ ತನಿಖೆ ಮಾಡುತ್ತೇವೆ. ಅತಿವೃಷ್ಠಿಯಲ್ಲಿ ಮನೆ ಕಳೆದುಕೊಂಡ ಫಲಾನುಭವಿಗಳ ಆಯ್ಕೆಯಲ್ಲಿ ಭ್ರಷ್ಟಾಚಾರ ನಡೆದಿರುವ ವಿಚಾರ ನಮಗೆ ತಿಳಿದಿದೆ. ಈ ಕುರಿತಂತೆ ಸರ್ಕಾರ ಚರ್ಚಿಸಲಿದೆ ಎಂದು ಸಲೀಂ ಅಹ್ಮದ್ ಹೇಳಿದರು.

ತಪ್ಪು ಮಾಡಿದವರಿಗೆ ತಕ್ಕ ಉತ್ತರ ನೀಡುತ್ತೇವೆ, ರಾಜ್ಯದಲ್ಲಿ ಪ್ರಮಾಣಿಕ ಸರ್ಕಾರ ನೀಡಲಾಗುವುದು. ರಾಜ್ಯದಲ್ಲಿ ಬಂದ್ ಆಗಿರುವ ಇಂದಿರಾ ಕ್ಯಾಂಟೀನ್‌ಗಳನ್ನ ಮತ್ತೆ ಆರಂಭಿಸುವ ಕೆಲಸ ಮಾಡುತ್ತೇವೆ ಎಂದ ಸಲೀಂ ಅಹ್ಮದ್, ವಿದ್ಯುತ್ ಬಿಲ್ ಪರಿಷ್ಕರಣೆ ಕುರಿತಂತೆ ಮಾತನಾಡಿ, ಹಿಂದಿನ ಸರ್ಕಾರ ಚುನಾವಣೆ ಇರುವದರಿಂದಲೇ ಪರಿಷ್ಕರಣೆ ಮಾಡಲಿಲ್ಲ ಎಂದು ಆರೋಪಿಸಿದರು. ವಿದ್ಯುತ್ ದರ ಪರಿಷ್ಕರಣೆ ಕೆಇಆರ್​ಸಿ ಮಾಡುತ್ತದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ, ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡಲ್ಲ ಎಂಬ ಆರೋಪ ಕೇಳಿಬರುತ್ತಿದೆ ಮುಂದಿನ ದಿನಗಳಲ್ಲಿ ಇದನ್ನ ಸರಿಪಡಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಎಡಪಂಥೀಯ ಓಲೈಕೆಗೆ ಕಾಂಗ್ರೆಸ್​ನಿಂದ ಪಠ್ಯ ಪುಸ್ತಕ ಬದಲಾವಣೆ : ಮಾಜಿ ಸ್ಪೀಕರ್​ ಕಾಗೇರಿ

Last Updated : Jun 12, 2023, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.