ETV Bharat / state

ಮೇಲ್ಸೇತುವೆಗೆ ಸಾವರ್ಕರ್ ಹೆಸರು: ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ಸತೀಶ್ ಜಾರಕಿಹೊಳಿ - satish jarakiholi latest news

ಬೆಂಗಳೂರಿನಲ್ಲಿ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಕುರಿತ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.

satish jarakiholi reaction on Veera Savarkar's name for the flyover
ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು: ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ಸತೀಶ್ ಜಾರಕಿಹೊಳಿ
author img

By

Published : May 29, 2020, 4:19 PM IST

ಹಾವೇರಿ: ಬೆಂಗಳೂರಿನಲ್ಲಿರುವ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರಿಡುವ ಕುರಿತಂತೆ ಈಗಾಗಲೇ ನಮ್ಮ ಪಕ್ಷದವರು ಪ್ರಶ್ನೆ ಎತ್ತಿದ್ದು, ಈ ಕುರಿತಂತೆ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಒಂದು ಕಡೆ ಮಾತುಕತೆ ನಡೆದಿದೆ. ಬಹುಶಃ ಮೈತ್ರಿಯಾದರೆ ಹೆಚ್ಚು ಸ್ಥಾನಗಳು ಬರಬಹುದು. ಈ ಕುರಿತಂತೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು. ಇನ್ನು ಪ್ರಸ್ತುತ ಕೊರೊನಾ ಇರುವ ಕಾರಣ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಹೆಚ್ಚು ಜನ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.