ಹಾವೇರಿ: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದಲೇ ವರುಣನ ಆರ್ಭಟ ಜೋರಾಗಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಮುಂದಿನ ಎರಡು ದಿನಗಳ ಕಾಲ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ಈ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಹರಿಯುವ ನದಿಗಳ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಧರ್ಮಾ, ವರದಾ, ಕುಮದ್ವತಿ ಮತ್ತು ತುಂದಭದ್ರಾ ನದಿಗಳ ಒಳಹರಿವು ಅಧಿಕವಾಗಿದೆ. ಸುರಕ್ಷಿತವಾಗಿರುವಂತೆ ನದಿ ತಟದ ಗ್ರಾಮಗಳಿಗೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.