ETV Bharat / state

ಜೈಲಿನಿಂದ ಹೊರಬಂದು ಉದ್ಧವ್ ಠಾಕ್ರೆ ಭೇಟಿಯಾದ ಸಂಜಯ್ ರಾವುತ್​ - ಅಕ್ರಮ ಹಣ ವರ್ಗಾವಣೆ ಪ್ರಕರಣ

ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ಇಡಿ ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ವಿಶೇಷ ನ್ಯಾಯಾಲಯವು ರಾವತ್​​ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಅವರ ಬಂಧನ ಕಾನೂನು ಬಾಹಿರವಾಗಿತ್ತು ಎಂದಿದೆ.

ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ಸಂಜಯ್ ರಾವತ್​

author img

By

Published : Nov 10, 2022, 7:56 PM IST

Updated : Nov 10, 2022, 9:04 PM IST

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಗುರುವಾರ ತಮ್ಮ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದರು. ಉದ್ಧವ್ ಠಾಕ್ರೆ ಅವರ ಪುತ್ರ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಉಪನಗರ ಬಾಂದ್ರಾದಲ್ಲಿರುವ ಠಾಕ್ರೆ ಅವರ ಖಾಸಗಿ ನಿವಾಸ 'ಮಾತೋಶ್ರೀ' ಹೊರಗೆ ರಾವುತ್ ಅವರನ್ನು ಸ್ವಾಗತಿಸಿದರು.

ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ: ನಂತರ ಸಂಜಯ್ ರಾವುತ್ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ನ್ಯಾಯಾಂಗವನ್ನು ಸರ್ಕಾರದ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ವಿರುದ್ಧ ವಾಗ್ದಾಳಿ ನಡೆಸಿದರು. ತನಿಖಾ ಸಂಸ್ಥೆಗಳು ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ ಎಂದು ಆರೋಪಿಸಿದರು.

ಕಾನೂನು ಸಚಿವರು ನ್ಯಾಯಾಂಗವನ್ನು ಸರ್ಕಾರದ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಜನರು ಚಿಂತಿಸಬೇಕು. ಕೇಂದ್ರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂಬುದು ನಿನ್ನೆಯ ಆದೇಶ ಸ್ಪಷ್ಟಪಡಿಸಿದೆ. ನಾನು ನ್ಯಾಯಾಂಗಕ್ಕೆ ಕೃತಜ್ಞನಾಗಿದ್ದೇನೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಬಂಧನ ರಾಜಕೀಯ ಪ್ರೇರಿತ: ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ರಾವತ್, ಉದ್ಧವ್ ಠಾಕ್ರೆ ಅವರು ಜೈಲಿನಲ್ಲಿದ್ದಾಗ ಅವರ ಕುಟುಂಬ ಸದಸ್ಯರ ಬೆಂಬಲಕ್ಕೆ ನಿಂತಿದ್ದರು. ಅವರ ಬಂಧನವು ರಾಜಕೀಯ ಪ್ರೇರಿತವಾಗಿದೆ ಮತ್ತು ಈ ರೀತಿಯ “ಸೇಡಿನ ರಾಜಕೀಯ” ಈ ಹಿಂದೆ ದೇಶದಲ್ಲಿ ಕಂಡುಬಂದಿರಲಿಲ್ಲ ಎಂದು ಹೇಳಿದ್ದಾರೆ.

ಬುಧವಾರ ಸಂಜೆ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದ ನಂತರ, ರಾವುತ್ ಅವರು ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಅವರ ಧ್ವನಿಯು ಅವರ ನಡುವೆ ಭಾವನಾತ್ಮಕ ಸಂವಾದವನ್ನು ಸೂಚಿಸುತ್ತದೆ ಎಂದು ಹೇಳಿದರು. ರಾವತ್ ಮತ್ತು ಉದ್ಧವ್ ಠಾಕ್ರೆ ಆಪ್ತರು.

ಬಂಧನ ಕಾನೂನು ಬಾಹಿರ: ಮುಂಬೈನ ವಿಶೇಷ ನ್ಯಾಯಾಲಯವು ಬುಧವಾರ ರಾಜ್ಯಸಭಾ ಸದಸ್ಯ ರಾವುತ್‌ಗೆ ಜಾಮೀನು ಮಂಜೂರು ಮಾಡಿದೆ. ಅವರ ಬಂಧನ "ಅಕ್ರಮ" ಮತ್ತು "ಮಾಟಗಾತಿ-ಬೇಟೆ" ಎಂದು ಹೇಳಿದೆ. ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ರಾವುತ್ ಅವರನ್ನು ಬಂಧಿಸಿತ್ತು.

ಓದಿ: ನನ್ನ ಬಂಧನಕ್ಕೆ ರಾಜಕೀಯ ಪಿತೂರಿ ಕಾರಣ: ಸಂಜಯ್ ರಾವತ್

Last Updated : Nov 10, 2022, 9:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.