ಹಾವೇರಿ: ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಆರ್‌ಟಿಒ ಕಚೇರಿ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನ ರವಿ ಅಂಗಡಿ (15) ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಬಸ್ ಸವಾರನ ಮೇಲೆ ಹರಿದ ಪರಿಣಾಮ ರವಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಾವೇರಿ ಡಿವೈಎಸ್ಪಿ ವಿಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತೊಂದು ಪ್ರಕರಣದಲ್ಲಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಬೈಕ್‌ನಲ್ಲಿದ್ದ ಮತ್ತಿಬ್ಬರಿಗೆ ಗಾಯವಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮಲ್ಲಿಕ್ ರೆಹಾನ ಹುಲಿಕಟ್ಟಿ( 21) ಮೃತ ಬೈಕ್ ಸವಾರ. ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರಕರಣ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.