ಹಾವೇರಿ: ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಏಳು ಜನರು ಗಾಯಗೊಂಡಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕವಿತಾ ಮೂಲಿಮನಿ(30) ಮೃತ ಮಹಿಳೆ. ಗಾಯಾಳುಗಳನ್ನ ರತ್ನಾ (35), ಮಾರುತಿ (45), ಶಶಿಕಲಾ (35), ರವೀಂದ್ರಪ್ಪ (65), ಸುಧಾ (60) ,ಸಾಕಮ್ಮ (45) ಮತ್ತು ಜುಬೇದಾಬಾನು (32) ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ರಟ್ಟೀಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಹಾಗೂ ಹಾವೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಮಾರುತಿ ಸುಣಗಾರ ಎಂಬುವರ ಜಮೀನಿನಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಕಾಂಗ್ರೆಸ್ನವರು ಅವರ ಗುಂಡಿ ಅವರೇ ತೋಡಿಕೊಳ್ಳುತ್ತಿದ್ದಾರೆ: ಸಚಿವ ಅಶ್ವತ್ಥನಾರಾಯಣ ಕಿಡಿ