ETV Bharat / state

ಸುಳ್ಳು ಜಾತಿ ಪ್ರಮಾಣ ಪತ್ರ ಮಾಡಿಸಿ ಕಾನ್ಸ್​​ಟೇಬಲ್ ಹುದ್ದೆ: ಅಪರಾಧಿಗೆ 7 ವರ್ಷ ಜೈಲು ಶಿಕ್ಷೆ

ಸುಳ್ಳು ಜಾತಿ ಪ್ರಮಾಣಪತ್ರ ಮಾಡಿಸಿ ಸಶಸ್ತ್ರ ಪೊಲೀಸ್​​ ಕಾನ್ಸ್​​ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ಅಪರಾಧಿಗೆ ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ 7 ವರ್ಷ ಸಜೆ ಮತ್ತು 30 ಸಾವಿರ ರೂಪಾಯಿ ದಂಡ ವಿಧಿಸಿದೆ.

Haveri District and Sessions Court Complex
ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಸಂಕೀರ್ಣ
author img

By ETV Bharat Karnataka Team

Published : Dec 21, 2023, 12:13 PM IST

ಹಾವೇರಿ: ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್​ ಕಾನ್ಸ್​​ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ಆರೋಪಿಗೆ ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಏಳು ವರ್ಷ ಜೈಲು ಶಿಕ್ಷೆ ಜತೆಗೆ 30 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ಆರೋಪಿ ಸೋಮಶೇಖರ ಭೀಮಪ್ಪ ಕುಂಕುಮಗಾರ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಸಶಸ್ತ್ರ ಪೊಲೀಸ್​ ಕಾನ್ಸ್​​ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಭೋಗಾವಿ ಗ್ರಾಮದ ಸೋಮಶೇಖರ ಭೀಮಪ್ಪ ಈತನು ಮೂಲತಃ ಕುಂಕುಮಗಾರ (ಬಲಿಜ ಜನಾಂಗ) ಜಾತಿಗೆ ಸೇರಿದ್ದ.

ಆದರೂ ಸಹ ಭೋಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಹನುಮಂತಪ್ಪ ತಳವಾರ ಅವರ ಸಹಕಾರ ಪಡೆದು ಚನ್ನದಾಸರ ಎಂದು ಜಾತಿ ಕಾಲಂನಲ್ಲಿ ನಮೂದಿಸಿ, ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಇತರ ದಾಖಲಾತಿಗಳನ್ನು ಸೃಷ್ಟಿಸಿದ್ದರು.

ಈ ಕುರಿತಂತೆ ಹಿರೇಕೆರೂರು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ, ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿದ್ದರು. ಅಷ್ಟೇ ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಸಶಸ್ತ್ರ ಪೊಲೀಸ್​ ಕಾನ್ಸ್​​ಟೇಬಲ್​ ಹುದ್ದೆಗೆ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅಧ್ಯಕ್ಷರ ನಡಾವಳಿಯಿಂದ ಮತ್ತು ತನಿಖೆಯಿಂದ ಆರೋಪ ದೃಢಪಟ್ಟ ಅಂಶದ ಮೇಲೆ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದಾವಣಗೆರೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ತನಿಖಾಧಿಕಾರಿ ಪೊಲೀಸ್ ಆರಕ್ಷಕ ಉಪ ನಿರೀಕ್ಷಕರಾದ ಶ್ರೀಮತಿ ಜಯರತ್ನಮ್ಮ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿ ಮೇಲೆ ಹೊರಿಸಲಾದ ಭಾರತೀಯ ದಂಡ ಸಂಹಿತೆ ಕಲಂ 196, 197, 198, 417, 420, 468, 471, ಐಪಿಸಿ ಮತ್ತು 1990 ಮತ್ತು ಕಲಂ 3(1)ಎಸ್‍ಸಿ/ಎಸ್‍ಟಿ (ಪಿಎ) ತಿದ್ದುಪಡಿ ಕಾಯ್ದೆ- 2015 ಅಡಿಯಲ್ಲಿ ಆಪಾದನೆಗಳು ರುಜುವಾತದ ಹಿನ್ನಲೆಯಲ್ಲಿ ಆರೋಪಿತರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀನಾರಾಯಣ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಒಂದನೇ ಅಧಿಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಜಿ.ಕೂಡಲಗಿಮಠ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಹಾವೇರಿ: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಗ್ರಾಪಂ ಸದಸ್ಯೆಯಾಗಿದ್ದ ಮಹಿಳೆಗೆ 7 ವರ್ಷ ಜೈಲು ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.