ಹಾವೇರಿ: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹಾವೇರಿ ಜಿಲ್ಲಾ ನ್ಯಾಯಾಲಯ 20 ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಆರೋಪಿ 26 ವರ್ಷದ ಅನಿಲ್ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಈತ 2016ರ ಜೂನ್ 7 ರಂದು ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು.
ಈ ಕುರಿತಂತೆ ಹಾವೇರಿ ಜಿಲ್ಲೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.