ಹಾವೇರಿ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ಮೂವತ್ತು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.
ಆರೋಪಿ ಅಬ್ದುಲ್ ಗಫಾರ್ (37) ವಿರುದ್ಧ 2016 ಅಕ್ಟೋಬರ್ 25 ರಂದು ಬಾಲಕನ ಮೇಲೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸವಣೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು.
ಹಾವೇರಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ವಿಚಾರಣೆ ನಡೆಸಿ ಆರೋಪಿಗೆ ಜೀವಾವಧಿ ಶಿಕ್ಷೆ ಸೇರಿ ಮೂವತ್ತು ಸಾವಿರ ರೂ. ದಂಡ ವಿಧಿಸಿದೆ.