ETV Bharat / state

ಸಿಎಂ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಫೈಟರ್​​ ಯಾರು?: ಗುಟ್ಟು ಬಿಟ್ಟುಕೊಡದ ಕಾಂಗ್ರೆಸ್ - ವಿಧಾನಸಭೆ ಚುನಾವಣೆ 2023

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿಎಂ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರಕ್ಕೆ ಪಕ್ಷ ಯಾವುದೇ ಅಭ್ಯರ್ಥಿಯನ್ನು ಘೋಷಿಸಿಲ್ಲ. ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಹುರಿಯಾಳಾಗಿ ಇಳಿಸುವ ಚಿಂತನೆ ಕಾಂಗ್ರೆಸ್​ ಹೊಂದಿದೆ.

ಸಿಎಂ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಫೈಟರ್
ಸಿಎಂ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಫೈಟರ್
author img

By

Published : Mar 25, 2023, 2:10 PM IST

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್​ ತನ್ನ 124 ಹುರಿಯಾಳುಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಅದರಲ್ಲಿ ಕೆಲ ಹಾಲಿ ಶಾಸಕರಿಗೆ ಟಿಕೆಟ್​ ನಿರಾಕರಣೆ ಮಾಡಿದರೆ, ಕೆಲ ಮಹತ್ವದ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯನ್ನು ಬಾಕಿ ಉಳಿಸಿಕೊಂಡಿದೆ. ಶೀಘ್ರದಲ್ಲೇ 2 ನೇ ಪಟ್ಟಿಯನ್ನು ರಿಲೀಸ್​ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿದ್ದರೂ, ಕೊನೆಯಲ್ಲಿ ಮನಸ್ಸು ಬದಲಿಸಿ ವರುಣದಿಂದ ಕಣಕ್ಕಿಳಿಯಲಿರುವುದಾಗಿ ಪಟ್ಟಿಯಲ್ಲಿ ಘೋಷಿಸಲಾಗಿದೆ. ಇದರಿಂದ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷೇತ್ರ ಘೋಷಣೆ ಮಾಡಲಾಗಿಲ್ಲ. ಅವರು ಈ ಬಾರಿಯ ಚುನಾವಣೆ ತಪ್ಪಿಸಿಕೊಳ್ಳಲಿದ್ದಾರಾ ಅಥವಾ ಚಾಮುಂಡೇಶ್ವರಿಯಿಂದ ಕಣಕ್ಕಿಳಿಯಲಿದ್ದಾರಾ ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಕೋಲಾರ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಪ್ರವೇಶದಿಂದ ಸದ್ದು ಮಾಡಿದ್ದ ಕೋಲಾರ, ಮುಳಬಾಗಿಲು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಲಾಗಿಲ್ಲ. ಇದಲ್ಲದೇ ಹಾಲಿ ಶಾಸಕ ಸ್ಥಾನವಿರುವ ಬಾದಾಮಿಯಲ್ಲೂ ಅಭ್ಯರ್ಥಿ ಘೋಷಿಸಿಲ್ಲ. ಇದು ಎರಡೂ ಕ್ಷೇತ್ರಗಳಿಂದ ಅವರು ಸ್ಪರ್ಧೆ ಮಾಡಲಿದ್ದಾರಾ ಎಂಬ ರಹಸ್ಯ ಉಳಿಸಿದೆ.

ಓದಿ: ಕನ್ನಡ ದೇಶದ ಗೌರವ ಹೆಚ್ಚಿಸುವ ಭಾಷೆ: ಪ್ರಧಾನಿ ಮೋದಿ ಬಣ್ಣನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್​ನ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಈ ಕ್ಷೇತ್ರದಲ್ಲಿ ಈ ಮೊದಲೇ ಕೇಳಿಬಂದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಎದುರಾಳಿಯನ್ನಾಗಿ ಪಕ್ಷ ಘೋಷಿಸಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಸದ್ಯಕ್ಕೆ ಸಸ್ಪೆನ್ಸ್​ ಮುಂದುವರಿದಿದೆ. ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದ ವಿನಯ್​ ಕುಲಕರ್ಣಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಶಿಗ್ಗಾಂವಿಯಲ್ಲಿ ಪಂಚಮಸಾಲಿ ಮತದಾರರು ಹೆಚ್ಚಿನ ಪ್ರಮಾಣದಲ್ಲಿ, ಆ ಮತಗಳ ಲಾಭ ಪಡೆಯಲು ಕಾಂಗ್ರೆಸ್​ ಮಾಜಿ ಸಚಿವರ ಕಣಕ್ಕಿಳಿಸಲು ಚಿಂತಿಸಿದೆ ಎಂದು ಹೇಳಲಾಗಿದೆ.

ವಿನಯ್ ಕುಲಕರ್ಣಿಯೇ ಯಾಕೆ?: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಲಿಂಗಾಯತ ಜಾತಿಗೆ ಸೇರಿದ್ದು, ಅದೇ ಸಮುದಾಯದ ವಿನಯ್​ ಕುಲಕರ್ಣಿ ಅವರನ್ನು ಸಿಎಂ ವಿರುದ್ಧ ಕಣಕ್ಕಿಳಿಸಬೇಕು ಎಂಬುದು ಕಾಂಗ್ರೆಸ್​ ತಂತ್ರವಾಗಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧೆಗಿಳಿಸಲು ಕಾಂಗ್ರೆಸ್ ಹಲವಾರು ಆಯಾಮಗಳಿಂದ ಯೋಚಿಸುತ್ತಿದೆ. ಮುಖ್ಯಮಂತ್ರಿಗಳ ಕ್ಷೇತ್ರ ಶಿಗ್ಗಾಂವಿಯಲ್ಲಿ ಲಿಂಗಾಯತರೇ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಪ್ರಮುಖ ಒಳಪಂಗಡದವರಾದ ಪಂಚಮಸಾಲಿ ಮತಗಳು ಅಭ್ಯರ್ಥಿ ಗೆಲುವಿನಲ್ಲಿ ನಿರ್ಣಾಯಕವಾಗಿವೆ.

ವಿನಯ್ ಕುಲಕರ್ಣಿ ಸ್ಪರ್ಧೆಯಿಂದ ಬೊಮ್ಮಾಯಿಗೆ ಚುನಾವಣೆಯಲ್ಲಿ ಹೆಚ್ಚಿನ ಪೈಪೋಟಿ ಎದುರಾಗಲಿದೆ. ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಬಸವರಾಜ ಬೊಮ್ಮಾಯಿ ರಾಜ್ಯಾದ್ಯಂತ ಚುನಾವಣೆ ಪ್ರಚಾರ ನಡೆಸುವುದಕ್ಕೆ ಕಡಿವಾಣ ಹಾಕಬಹುದು. ಪ್ರಬಲ ಅಭ್ಯರ್ಥಿ ಸ್ಪರ್ಧೆಯಿಂದ ಗೆಲುವಿಗಾಗಿ ಬೊಮ್ಮಾಯಿ ತಮ್ಮ ಕ್ಷೇತ್ರದ ಕಡೆಯೇ ಹೆಚ್ಚು ಗಮನಹರಿಸುವಂತಹ ಸನ್ನಿವೇಶ ಸೃಷ್ಟಿಸಿ ಒಂದು ರೀತಿ ಶಿಗ್ಗಾಂವಿಯಲ್ಲಿಯೇ ಮುಖ್ಯಮಂತ್ರಿಗಳನ್ನು ಕಟ್ಟಿಹಾಕುವ ತಂತ್ರಗಾರಿಕೆಯನ್ನೂ ಕಾಂಗ್ರೆಸ್ ಹೊಂದಿದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿರುವ ವೈಶಿಷ್ಟ್ಯಗಳೇನು ಗೊತ್ತಾ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.