ಹಾವೇರಿ: ನನಗೆ ಟಿಕೆಟ್ ನೀಡಿದ್ದರಿಂದ ನಿನ್ನೆಯವರೆಗೂ ಕೆಲವರಲ್ಲಿ ಅಸಮಾಧಾನವಿತ್ತು. ಆದರೆ ಇಂದು ಯಾರಲ್ಲೂ ಅಸಮಾಧಾನವಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಹೇಳಿದರು.
ಸಂಸದ ಶಿವಕುಮಾರ್ ಉದಾಸಿಯವರ ನಿವಾಸದೆದುರು ಮಾತನಾಡಿದ ಅವರು, ಬಹಳ ತಡವಾಗಿ ಟಿಕೆಟ್ ಘೋಷಣೆಯಾಗಿದ್ದರಿಂದ ನಾಮಪತ್ರ ಸಲ್ಲಿಕೆಗೆ ಬಹಳಷ್ಟು ಜನರಿಗೆ ಹೇಳಲಾಗಿಲ್ಲ. ಈ ಉಪಚುನಾವಣೆಯಲ್ಲಿ ಗೆಲುವು ನಮ್ಮದೇ ಎಂದರು.
ಇದೇ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಹಾನಗಲ್ ಬಿಜೆಪಿಯ ಭದ್ರಕೋಟೆ. ಉದಾಸಿಯವರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಸಜ್ಜನ್ 25 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ, ಟಿಕೆಟ್ ಹಂಚಿಕೆ ಸಮಯದಲ್ಲಿ ಅಸಮಾಧಾನ ಸಹಜ, ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: IT ಅಧಿಕಾರಿಗಳು ವಿಚಾರಣೆಗೆ ಕರೆದಾಗ ಉಮೇಶ್ ಹಾಜರಾಗುತ್ತಾರೆ: ಬಿ.ಎಸ್.ಯಡಿಯೂರಪ್ಪ