ETV Bharat / state

ಹಾವೇರಿ ಲೋಕಸಭಾ ಕ್ಷೇತ್ರ: ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್ - ಪ್ರಧಾನಿ ನರೇಂದ್ರ ಮೋದಿ

ನಾನು ಸಂಸದನಾಗಿ ಆಯ್ಕೆಯಾದರೆ ಜಿಲ್ಲೆಯ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಚರ್ಚಿಸುತ್ತೇನೆ ಎಂದು ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್ ಹೇಳಿದ್ದಾರೆ.

ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್
ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್
author img

By

Published : Aug 4, 2023, 9:49 PM IST

ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್

ಹಾವೇರಿ: ಸತತ ಮೂರು ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಶಿವಕುಮಾರ್ ಉದಾಸಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಹಾವೇರಿ ಲೋಕಸಭೆ ಬಿಜೆಪಿಯ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಈ ಮಧ್ಯೆ ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ತನ್ನನ್ನೂ ಆಯ್ಕೆ ಮಾಡಬೇಕು ಎಂದು ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್ ಒತ್ತಾಯಿಸಿದ್ದಾರೆ.

ಹಾವೇರಿಯಲ್ಲಿಂದು ಮಾತನಾಡಿದ ಅವರು, ನಾನು ಕಳೆದ 40 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಗದಗದಲ್ಲಿ ವಿದ್ಯಾರ್ಥಿ ಜೀವನ ಕಳೆದಿದ್ದು, ನಂತರ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಈ ಹಿಂದೆ ಹಾವೇರಿ ಲೋಕಸಭೆಯಾಗುವ ಮುನ್ನ ಹಾವೇರಿ ಧಾರವಾಡ ದಕ್ಷಿಣ ಲೋಕಸಭೆ ಕ್ಷೇತ್ರವಾಗಿತ್ತು. ಅಂದು ಬಿಜೆಪಿಯ ನಾಯಕರಾಗಿದ್ದ ವೆಂಕಯ್ಯ ನಾಯ್ಡು ನನಗೆ ಧಾರವಾಡ ದಕ್ಷಿಣ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು ಎಂದರು.

ಇದನ್ನೂ ಓದಿ: ಮನೆ ಕಳೆದುಕೊಂಡಿರುವ ರೈತರಿಗೆ ಧೈರ್ಯ ತುಂಬುವ ಕೆಲಸ ಸರ್ಕಾರ ಮಾಡಿಲ್ಲ: ಬೊಮ್ಮಾಯಿ

ಆದರೆ, ಅಂದು ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪ, ಬಿ.ಜೆ.ಬಣಕಾರ್ ಟಿಕೆಟ್ ಬಿಟ್ಟುಕೊಡುವಂತೆ ಮನವಿ ಮಾಡಿದ್ದರು. ಅಲ್ಲದೆ ಮುಂದಿನ ದಿನಗಳಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಾಡುವ ಭರವಸೆ ನೀಡಿದ್ದರು. ಆದರೆ, ಆ ಭರವಸೆ ಭರವಸೆಯಾಗಿಯೇ ಉಳಿದಿದೆ. ನಾನು ಬ್ಯಾಡಗಿ ಲೋಕಸಭಾ ತಾಲೂಕು ಪಂಚಾಯತ್ ಸೇರಿದಂತೆ ಹಲವು ಹುದ್ದೆಗಳ ತ್ಯಾಗ ಮಾಡಿದ್ದೇನೆ. ಹೀಗಾಗಿ, ನನಗೆ ಈ ಬಾರಿ 2024 ರ ಲೋಕಸಭೆಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.

ಇದನ್ನೂ ಓದಿ: ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಲಾವಿದರಿಗೆ ಇನ್ನೂ ಸಿಕ್ಕಿಲ್ಲ ಗೌರವಧನ.. ಸ್ಮರಣ ಸಂಚಿಕೆ ಮರೀಚಿಕೆ

40 ವರ್ಷದಿಂದ ಜನಸಂಘದಲ್ಲಿರುವ ನಾನು ಬ್ಯಾಡಗಿ ಪುರಸಭೆಯ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮತ್ತು ಹಲವು ಸಂಘಟನೆಗಳ ಅಧ್ಯಕ್ಷನಾಗಿ ಕೆಲಸ ಮಾಡಿದ್ದ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಮುರಿಗೆಪ್ಪ ಶೆಟ್ಟರ್ ತಿಳಿಸಿದರು. ಗದಗ ಜಿಲ್ಲೆಯ ನಗರ ಪ್ರದೇಶಗಳು, ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಕರ್ತರ ಸಂಪರ್ಕವಿದೆ. ಹಾವೇರಿ ಜಿಲ್ಲೆಯಲ್ಲಿ ಸಹ ಸಾಕಷ್ಟು ಸಂಪರ್ಕ ಹೊಂದಿದ್ದೇನೆ. 2024 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಒಳ್ಳೆಯ ಅವಕಾಶವಿದೆ. ನಾನು ಸಂಸದನಾಗಿ ಆಯ್ಕೆಯಾದರೆ ಜಿಲ್ಲೆಯ ಸಮಸ್ಯೆಗಳನ್ನ ಲೋಕಸಭೆಯಲ್ಲಿ ಚರ್ಚಿಸುತ್ತೇನೆ. ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುತ್ತೇನೆ. ಅಲ್ಲದೆ ಕಾರ್ಯಕರ್ತರ ಸೇವಕನಾಗಿ ಇರುತ್ತೇನೆ ಎಂದು ಮುರಿಗೆಪ್ಪ ಶೆಟ್ಟರ್ ತಿಳಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಸೇವಾಕೇಂದ್ರಗಳ ಕೊರತೆ.. ದಿನವಿಡಿ ಕ್ಯೂ ನಲ್ಲಿ ನಿಂತು ಸುಸ್ತಾದ ಹಾವೇರಿ ಮಂದಿ-ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.