ಹಾವೇರಿ: ಉಕ್ರೇನ್ ಹಾಗೂ ರಷ್ಯಾ ಯುದ್ಧದಲ್ಲಿ ಮೃತಪಟ್ಟ ಕರ್ನಾಟಕದ ವಿದ್ಯಾರ್ಥಿ ನವೀನ್ ನಿವಾಸಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿ ರಷ್ಯಾ ದಾಳಿಗೆ ಕನ್ನಡಿಗ ನವೀನ್ ಸಾವನ್ನಪ್ಪಿದ್ದಾರೆ. ನವೀನ್ ನಮ್ಮ ಮೈಸೂರಿನಲ್ಲಿ ಓದಿದ ಹುಡುಗ. ಆತನ ಮೇಲೆ ತಂದೆ ತಾಯಿ ದೊಡ್ಡ ಆಸೆ ಇಟ್ಟುಕೊಂಡಿದ್ದರು. ದುರಾದೃಷ್ಟವಶಾತ್ ನವೀನ್ ಓದು ಮುಗಿಸಲಾಗಲಿಲ್ಲ. ಬಂಕರ್ನಲ್ಲಿದ್ದವರಿಗೆ ತಿಂಡಿ ತರಲು ಹೋದ ವೇಳೆ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ಆತನ ಮೇಲೆ ಹಲವು ನಿರೀಕ್ಷೆಗಳಿದ್ದವು ಎಂದು ಬೇಸರ ವ್ಯಕ್ತಪಡಿಸಿದರು.
ನವೀನ್ ಮೃತ ದೇಹವನ್ನ ಭಾರತಕ್ಕೆ ತರುವ ಪ್ರಯತ್ನ ಮಾಡಬೇಕು. ಮೃತದೇಹ ತರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವೆ. ಕೋಳಿವಾಡರ ಪುತ್ರ ತಮ್ಮ ಕಂಪನಿಯ ವಿಮಾನದಲ್ಲಿ ಮೃತದೇಹ ತರಲು ಅನುಮತಿ ಕೇಳಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮೃತ ನವೀನ್ ನಮ್ಮ ಮೈಸೂರಿನಲ್ಲಿ ಓದಿದ ಹುಡುಗ ಎಂದು ಹೇಳಿಕೆ ನೀಡಿದರು.
ಇದನ್ನೂ ಓದಿ: ಟರ್ಕಿಯಲ್ಲಿ ನಾಳೆ ರಷ್ಯಾ ಮತ್ತು ಉಕ್ರೇನ್ ವಿದೇಶಾಂಗ ಸಚಿವರ ಸಭೆ