ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಿಂದ ಹೊಸಪೇಟೆ, ಹುಬ್ಬಳ್ಳಿ, ದಾವಣಗೆರೆ ಸೇರಿ ಪ್ರಮುಖ ನಗರಗಳಿಗೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ, ವಾಹನಗಳ ದಟ್ಟಣೆ ಅಧಿಕವಾಗಿದೆಯೇ ಹೊರತು ಸಂಚಾರ ನಿಯಮಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಕುರಿತಂತೆ ಸಂಬಂಧಪಟ್ಟವರು ಕೋಡಲೇ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ನಗರದ ಹೆಸ್ಕಾಂ ಕಚೇರಿ, ಜಿಲ್ಲಾಸ್ಪತ್ರೆ ಮತ್ತು ನಗರಠಾಣೆ ಮುಂದೆ ಸಿಗ್ನಲ್ ಲೈಟ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿ ನಾಲ್ಕನ್ನು ಷಟ್ಪಥ ಮಾಡುತ್ತಿರುವ ಹಿನ್ನೆಲೆ ಅಲ್ಲಿ ಸಂಚರಿಸುವ ವಾಹನಗಳು ಸಹ ನಗರದಲ್ಲಿ ಸಂಚರಿಸುತ್ತಿವೆ. ಇದರಿಂದಾಗಿ ನಗರದಲ್ಲಿ ವಾಹನಗಳ ದಟ್ಟಣೆ ಅಧಿಕವಾಗಲಾರಂಭಿಸಿದ್ದು, ನಗರದಲ್ಲಿ ಸಾಕಷ್ಟು ಸಮಸ್ಯೆಗಳಾಗುತ್ತಿದೆ. ಕೂಡಲೇ ಸಿಗ್ನಲ್ ಲೈಟ್ಗಳನ್ನು ಸರಿಪಡಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.