ರಾಣೆಬೆನ್ನೂರು (ಹಾವೇರಿ): ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆ ಸಹಿ ಸಂಗ್ರಹ ಅಭಿಯಾನ ನಡೆಸಿತು.
ರಾಣೆಬೆನ್ನೂರು ನಗರದ ಬಸ್ ನಿಲ್ದಾಣ ಮುಂಭಾಗ ಎಬಿವಿಪಿಯ ಕಾರ್ಯಕರ್ತರು ಈ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ತಾಲೂಕು ಸಂಚಾಲಕ ರಾಘವೇಂದ್ರ, ದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಸರ್ಕಾರ ಸಂಪೂರ್ಣ ನಿರ್ಮೂಲನೆ ಮಾಡಬೇಕಾಗಿದೆ. ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾ ಕಂಡು ಬಂದಿರುವುದು ಅಸಹ್ಯಕರ ಸಂಗತಿ. ಇಂತಹ ದಂಧೆಯಲ್ಲಿ ಭಾಗಿಯಾದವರನ್ನು ಪೊಲೀಸರು ಬಂಧಿಸಿ ಅವರ ಮೇಲೆ ದೇಶದ್ರೋಹ ಪ್ರಕರಣವನ್ನು ದಾಖಲಿಸುವಂತೆ ಆಗ್ರಹಿಸಿ, ಎಬಿವಿಪಿ ಸಂಘಟನೆ ವತಿಯಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.