ರಾಣೆಬೆನ್ನೂರು : ಸಾಮಾಜಿಕ ಅಂತರದ ನಿಯಮ ಗಾಳಿಗೆ ತೂರಿ ಪಟ್ಟಣದ ಶಾಲೆಯೊಂದರಲ್ಲಿ ಡಿಡಿಪಿಐ ಪ್ರೌಢ ಶಾಲಾ ಮುಖ್ಯಸ್ಥರ ಸಭೆ ನಡೆಸಿದ್ದಾರೆ.
ಪಟ್ಟಣದ ಶಿವಾ ಗ್ರಾಮಾಂತರ ಪ್ರೌಢ ಶಾಲೆಯಲ್ಲಿ ಡಿಡಿಪಿಐ ಅಂದಾನಪ್ಪ ವಡಗೇರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ದತಾ ಸಭೆ ಕರೆದಿದ್ದರು. ಸಭೆಯಲ್ಲಿ, ಪಟ್ಟಣ ಮತ್ತು ಗ್ರಾಮೀಣ ಭಾಗದ ಸುಮಾರು 22 ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹ ಶಿಕ್ಷಕರು ಭಾಗವಹಿಸಿದ್ದರು. ತರಗತಿಯ ಕೊಠಡಿಯಲ್ಲಿ ಸಭೆ ಆಯೋಜಿಸಿದ್ದರಿಂದ ಶಿಕ್ಷಕರು ಸಾಮಾಜಿಕ ಅಂತರ ಮರೆತು ಒಂದೇ ಡೆಸ್ಕ್ನಲ್ಲಿ ಗುಂಪು ಗುಂಪಾಗಿ ಕುಳಿತಿದ್ದು ಕಂಡು ಬಂತು.
ಶಿಕ್ಷಕ ಸಭೆಯಲ್ಲೇ ಸಾಮಾಜಿಕ ಅಂತರದ ನಿಯಮ ಉಲ್ಲಂಘಿಸಿದ ಡಿಡಿಪಿಐ ಮುಂಬರುವ ಎಸ್ಸೆಸೆಲ್ಸಿ ಪರೀಕ್ಷೆಗೆ ಯಾವ ರೀತಿ ಸಿದ್ದತೆ ನಡೆಸಿರಬಹುದು ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.