ಹಾವೇರಿ: ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆಗೆ ಮುಂದಾದ ಪೊಲೀಸ್ ಇಲಾಖೆ, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಸೂಚಿಸಿದೆ.
ಬೈಕ್ನಲ್ಲಿ ಒಬ್ಬರಿಗೆ ಮತ್ತು ಕಾರಿನಲ್ಲಿ ನಾಲ್ವರು ಪ್ರಯಾಣಿಸಲು ಮಾತ್ರ ಅವಕಾಶ ನೀಡಲಾಗುತ್ತಿದೆ. ಅದರಲ್ಲೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಲಾಠಿ ರುಚಿ ತೋರಿಸಲಾಗುತ್ತದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ.