ETV Bharat / state

ಪಂಜಾಬ್​​ ರಸ್ತೆ ಅಪಘಾತದಲ್ಲಿ ಹಾವೇರಿ ಯೋಧ ಸಾವು : ಸಿಎಂ ಸಂತಾಪ - ಈಟಿವಿ ಭಾರತ ಕನ್ನಡ

ಪಂಜಾಬಿನಲ್ಲಿ ಕರ್ತವ್ಯದಲ್ಲಿರುವಾಗಲೇ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಯೋಧರೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

soldier-died-in-road-accident-at-punjab
ಪಂಜಾಬ್​​ ರಸ್ತೆ ಅಪಘಾತದಲ್ಲಿ ಯೋಧ ಸಾವು : ಸಿಎಂ ಸಂತಾಪ
author img

By

Published : Oct 2, 2022, 3:40 PM IST

ಹಾವೇರಿ/ಬೆಂಗಳೂರು: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧರೊಬ್ಬರು ಪಂಜಾಬಿನಲ್ಲಿ ಕರ್ತವ್ಯದಲ್ಲಿರುವಾಗಲೇ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 23 ವರ್ಷದ ಶಿವರಾಜ ಗಂಗಮ್ಮನವರ ಎಂಬುವವರು ಮೃತ ಯೋಧ.

2016ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಶಿವರಾಜ ಅವರು, ಪಂಜಾಬಿನ ಬಟಿಂಡಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಶಿವರಾಜ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಗಸ್ಟ್ ತಿಂಗಳಲ್ಲಿ ಶಿವರಾಜ್ ಊರಿಗೆ ಬಂದು ಹೋಗಿದ್ದರು ಎಂದು ಹೇಳಲಾಗಿದೆ.

ಸಿಎಂ ಸಂತಾಪ: ಯೋಧ ಶಿವರಾಜ್​ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಂತಾಪ ಸೂಚಿಸಿದ್ದಾರೆ. ಪಂಜಾಬಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಇಂದು ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ಏಕೆ ಮಾತನಾಡಲಿ: ಸಿಎಂ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.