ETV Bharat / state

ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆಗೆ ಸಚಿವ ಶ್ರೀರಾಮುಲು ಬೇಸರ - ETV Bharat kannada News

ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ ವಿಚಾರಕ್ಕೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.

Minister Sriramulu
ಸಚಿವ ಶ್ರೀರಾಮುಲು
author img

By

Published : Apr 1, 2023, 6:22 AM IST

ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆಗೆ ಶ್ರೀರಾಮುಲು ಬೇಸರ

ಹಾವೇರಿ : ಕೂಡ್ಲಿಗಿ ಶಾಸಕ ಎನ್​.ವೈ. ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಸಚಿವ ಶ್ರೀರಾಮುಲು ಬೇಸರ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಬೇಜಾರಾಗಿದ್ದು, ಗೋಪಾಲಕೃಷ್ಣ ಅವರು ಏಕೆ ಈ ಆತುರದ ನಿರ್ಧಾರ ಕೈಗೊಂಡಿದ್ದಾರೋ ಗೊತ್ತಿಲ್ಲಾ. ಅವರು ಕೂಡ್ಲಿಗಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದರೇ ಗೆಲ್ಲುತ್ತಿದ್ದರು. ಆದರೇ ಅವರ ಈ ಆತುರದ ನಿರ್ಧಾರದಿಂದ ಕಾರ್ಯಕರ್ತರಿಗೆ ನೋವಾಗಿದ್ದು, ಬಿಜೆಪಿಗೂ ಮುಜುಗರವಾಗಿದೆ ಎಂದು ಹೇಳಿದರು.

ಗೋಪಾಲಕೃಷ್ಣ ಅವರು ರಾಜಕೀಯದಲ್ಲಿ ಬಹಳಷ್ಟು ಅನುಭವ ಇದ್ದವರು ಆರು ಬಾರಿ ವಿಧಾನಸಭೆ ಆಯ್ಕೆಯಾಗಿದ್ದವರು. ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಖಂಡಿತವಾಗಿಯೂ ಕಾರ್ಯಕರ್ತರಿಗೆ ನೋವಾಗಿದೆ. ಆದರೆ ಅವರು ಪಕ್ಷ ಬಿಟ್ಟ ನಂತರ ಬಿಜೆಪಿ ಆ ಕ್ಷೇತ್ರದಲ್ಲಿ ಗೆಲ್ಲಲಿದೆ ಅವರ ನಿರ್ಧಾರ ನಮಗೂ ನೋವು ತಂದಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚಿಗೆ ನಾನು ಬಿಜೆಪಿಯ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರಿಂದ ಅವರ ಜೊತೆ ಹೆಚ್ಚು ಸಮಯ ಮಾತನಾಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಅವರು ಮುಂದೆ ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬುದು ಗೊತ್ತಿಲ್ಲಾ. ಅವರು ರಾಜೀನಾಮೆ ನೀಡಿ ಈಗ ನನ್ನ ಕಡೆ ಆರು ಜನ ಇದ್ದಾರೆ ಎನ್ನುವುದು ಸುಳ್ಳು. ಯಾವ ಬೇಸರದಿಂದ ಹೋಗಿದ್ದಾರೆ ಎಂಬುದು ಗೊತ್ತಿಲ್ಲಾ. ಈಗಾಗಲೇ ನಮ್ಮ ಸರ್ಕಾರ ಕೂಡ್ಲಿಗಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದೆ. ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಮಂತ್ರ ಜಪಿಸಿದೆ. ಹೀಗಿರುವಾಗ ನಮ್ಮ ಜೊತೆ ಆರು ಜನ ಇದ್ದಾರೆ ಎನ್ನುವುದು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಎಂದು ಸಚಿವ ಶ್ರೀರಾಮುಲು ಹೇಳಿದರು.

2018 ರಲ್ಲಿ ಗೋಪಾಲಕೃಷ್ಣ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿತ್ತು. ಆ ಸಂದರ್ಭದಲ್ಲಿ ನಾನೆ ಮುಂದುವರೆದು ಅವರ ದೊಡ್ಡಮನೆತನಕ್ಕೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಕರೆತಂದಿದ್ದೆ. ಇಂದು ಬಿಜೆಪಿ ಪಕ್ಷ ಗಟ್ಟಿಯಾಗಿದ್ದು, ಬಹುಶಃ ಗೋಪಾಲಕೃಷ್ಣ ಬಿಜೆಪಿಯಿಂದ ಸ್ಪರ್ಧಿಸಿದ್ದರೆ ಗೆಲ್ಲುತ್ತಿದ್ದರೂ ಏನು ಈಗ ಅವರು ಬಿಟ್ಟು ಹೋಗಿದ್ದಾರೆ. ಇದರಿಂದ ಇನ್ನು ಬಿಜೆಪಿ ಪಕ್ಷ ಕೂಡ್ಲಗಿ ಕ್ಷೇತ್ರದ ಗೆಲ್ಲುವ ಕೆಲಸ ಮಾಡಲಿದೆ ಎಂದು ಶ್ರೀರಾಮುಲು ತಿಳಿಸಿದರು.

ಬಿಜೆಪಿಯಲ್ಲಿ ಅವರಿಗೆ ಯಾವುದೇ ರೀತಿಯ ಅನ್ಯಾಯವಾಗಲು ನಾವು ಬಿಟ್ಟಿರಲಿಲ್ಲಾ ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯ ಎಂದರು. ಅವರು ಕಾಂಗ್ರೆಸ್‌ನಲ್ಲಿ ಟಿಕೆಟ್ ಇಲ್ಲದೆ ತೊಂದರೆಯಲ್ಲಿ ಇದ್ದಾಗ ನಾವು ಸಹಾಯ ಮಾಡಿದ್ದೇವು. ಆದರೆ ಇಂದು ಗೋಪಾಲಕೃಷ್ಣ ಅವರು ಬಿಜೆಪಿಗೆ ರಾಜೀನಾಮೆ ನೀಡಿರುವುದರಿಂದ ಕೂಡ್ಲಿಗಿ ಕ್ಷೇತ್ರದಲ್ಲಿ ಪಕ್ಷಕ್ಕೆ ಯಾವುದೇ ಹಾನಿಯಾಗಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಗಟ್ಟಿಯಾಗಿದ್ದು, ಕಾರ್ಯಕರ್ತರಿದ್ದಾರೆ. ಕ್ಷೇತ್ರವನ್ನು ಪುನಃ ಬಿಜೆಪಿ ತೆಕ್ಕೆಗೆ ತರಲು ಪ್ರಯತ್ನಿಸುತ್ತೇವೆ ಮತ್ತು ಅದರಲ್ಲಿ ಯಶಸ್ವಿಯಾಗುತ್ತೇವೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟವಾಗಿ ಹೇಳಿದರು.

ಇದನ್ನೂ ಓದಿ : ನಾನು ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಲ್ಲ : ವಿನಯ್​ ಕುಲಕರ್ಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.