ಹಾವೇರಿ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಜಿಲ್ಲಾ ರೈತ ಸಂಘ ಆರೋಪಿಸಿದೆ.
ಈ ಬಗ್ಗೆ ನಗರದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಉಭಯ ಸರ್ಕಾರಗಳು ಇತ್ತೀಚೆಗೆ ಜಾರಿಗೆ ತಂದಿರುವ ಕಾಯ್ದೆಗಳು ರೈತ ವಿರೋಧಿ ನೀತಿಗೆ ಸಾಕ್ಷಿಯಾಗಿವೆ. ಇದನ್ನು ಖಂಡಿಸಿ ಇದೇ 21 ರಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ಸರ್ಕಾರ ಎಚ್ಚೆತ್ತು ಕಾಯ್ದೆಯಲ್ಲಿ ಮಾರ್ಪಾಡು ತರಬೇಕು. ಇಲ್ಲದಿದ್ದರೆ ಗ್ರಾಮ ಗ್ರಾಮಗಳಲ್ಲಿ ರೈತರು ದಂಗೆ ಏಳಲಿದ್ದಾರೆ. ವಿದ್ಯುತ್ ಖಾಸಗೀಕರಣವಾದರೆ ಮರುದಿನವೇ ರೈತರು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.