ಹಾವೇರಿ: ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆ ಅಧಿಕವಾಗಲು ಜನರ ನಿರ್ಲಕ್ಷ್ಯವೇ ಕಾರಣ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಜನರು ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಾರೆ. ರೋಗ ತೀವ್ರತೆ ಪಡೆದು ಆಮ್ಲಜನಕ ಪ್ರಮಾಣ ಕುಸಿಯುತ್ತಿದ್ದಂತೆ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇನ್ನೊಂದು ಕಡೆ ಮನೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಹೋಂ ಐಸೋಲೇಷನ್ ಮಾಡಲಾಗುತ್ತಿದೆ. ಇದು ಸಹ ಸಾವಿನ ಸಂಖ್ಯೆ ಅಧಿಕವಾಗಲು ಕಾರಣ ಎಂದರು.