ಹಾವೇರಿ : ಉನ್ನಾವೋ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ಹಾವೇರಿಯಲ್ಲಿ ಎಸ್ಎಫ್ಐ ಸಂಘಟನೆ ವತಿಯಿಂದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಇಜಾರಿಲಕಮಾಪುರದಲ್ಲಿರುವ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿನಿಯರು ಪಾಲ್ಗೊಂಡರು. ದೇಶದಲ್ಲಿ ಮಹಿಳೆಯರ ಮೇಲೆ ದಿನೇ ದಿನೇ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ವಿವಿಧ ಕಡೆ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆಯರಿಗೆ ಮೌನ ಸಲ್ಲಿಸುವ ಮೂಲಕ ಸಂತಾಪ ಸಲ್ಲಿಸಲಾಯಿತು. ಉನ್ನಾವೋ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗ್ರಹಿಸಿದರು. ಅಲ್ಲದೆ ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ಮೊದಲು ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಹಾಗೂ ನ್ಯಾಯಾಲಯಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.