ಹಾವೇರಿ:ವಿಧಾನಸಭಾ ಉಪಚುನಾವಣೆಗೆ ದಿನಾಂಕ ನಿಗಧಿಯಾದ ಹಿನ್ನೆಲೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.
ರಾಣೆಬೆನ್ನೂರು ಕ್ಷೇತ್ರದಲ್ಲಿ ಮೊದಲ ನಾಮಪತ್ರವನ್ನು ಪಕ್ಷೇತರ ಅಭ್ಯರ್ಥಿ ಸಲ್ಲಿಕೆ ಮಾಡಿದ್ದಾರೆ. ರೈತ ಮುಖಂಡ ಹನುಮಂತಪ್ಪ ಕಬ್ಬಾರ ಅವರು ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರವನ್ನು ಚುನಾವಣಾಧಿಕಾರಿ ದೇವರಾಜ. ಎ ಅವರಿಗೆ ಸಲ್ಲಿಸಿದರು.