ಹಾವೇರಿ : ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತ್ಯಪರೂಪದ ಘಟನೆಗಳು ನಡೆಯುತ್ತಿದೆ. ಬಹುತೇಕ ಕಡೆಗಳಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕಾವಿಧಾರಿಯೊಬ್ಬರು ಜಯಶಾಲಿಯಾಗಿದ್ದಾರೆ.
ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಎರಡನೆ ವಾರ್ಡಿನಿಂದ ಸ್ಪರ್ಧಿಸಿದ್ದ ಶರಣಬಸವೇಶ್ವರ ಮಠದ ಪ್ರಣವಾನಂದ ಸ್ವಾಮೀಜಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ: ಮಾಜಿ ಕಳ್ಳ ಶಿಗ್ಲಿ ಬಸ್ಯಾನ ಪತ್ನಿಗೆ ಕೂಡಿ ಬಂದ ಕಾಲ: ಎರಡೇ ಮತಗಳ ಅಂತರದಿಂದ ಗೆಲುವು..!
ಕಳೆದ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಪ್ರಣವಾನಂದ ಸ್ವಾಮೀಜಿ ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿ ಯಶಸ್ವಿಯಾಗಿದ್ದಾರೆ.