ಹಾವೇರಿ: ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಿನ್ನೆಲೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯ ಸೇವೆಯಿಂದ ಮೋಹನಕುಮಾರ ಕೆ.ಸಿ. ಅವರನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಜಿಲ್ಲಾ ಪಂಚಾಯತ್ ಸಿಇಓ ಮೊಹಮ್ಮದ್ ರೋಷನ್ ಆದೇಶ ಹೊರಡಿದ್ದಾರೆ. ರಟ್ಟೀಹಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮೋಹನಕುಮಾರ, ಪದೇ ಪದೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದ ಕಾರಣ ಜಿಲ್ಲೆಗೆ ತಮ್ಮ ಸೇವೆ ಅವಶ್ಯವಿಲ್ಲವೆಂದು ಜಿಲ್ಲೆಯಿಂದ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸಿಇಓ ರೋಷನ್ ನಿರ್ದೇಶಿಸಿದ್ದಾರೆ.