ಹಾವೇರಿ: ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ಬಳಿ ನಡೆದಿದೆ.
ಮೃತ ಸವಾರರನ್ನ ಅಭಿಷೇಕ ಕಂಬಾಳಿಮಠ (23) ಮತ್ತು ಮಹೇಶ ಗೌಳಿ (22) ಎಂದು ಗುರುತಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಟಾಟಾ ಏಸ್ ವಾಹನ ಸವಾರ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.