ಹಾನಗಲ್: ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಟೇಟಸ್ ಹಾಕಿಕೊಂಡಿದ್ದ ಹಿನ್ನೆಲೆ ಆಡೂರು ಪೊಲೀಸ್ ಠಾಣೆಯಲ್ಲಿ ಓರ್ವ ಯುವಕನ ವಿರುದ್ಧ ದೂರು ದಾಖಲಾಗಿದೆ.
ಇಮ್ರಾನ್ ಸುರಳೇಶ್ವರ (20) ಎಂಬಾತನ ವಿರುದ್ಧ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಮ ಮಂದಿರ ಶಿಲಾನ್ಯಾಸದ ಕುರಿತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿ ವಾಟ್ಸ್ಆ್ಯಪ್ ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ. ಈ ಕುರಿತು ಆಡೂರು ಗ್ರಾಮದ ಶ್ರೀಕಾಂತ ಕೊಂಚಿಗೇರಿ ಎಂಬುವವರು ದೂರು ದಾಖಲು ಮಾಡಿದ್ದಾರೆ.