ರಾಣೆಬೆನ್ನೂರು: ತಾಲೂಕಿನ 33 ಗ್ರಾಮ ಪಂಚಾಯಿತಿಗೆ ಡಿ.22 ಕ್ಕೆ ಮೊದಲ ಹಂತದ ಮತದಾನ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ.
ರಾಣೆಬೆನ್ನೂರು ತಾಲೂಕಿನಲ್ಲಿ ಒಟ್ಟು 40 ಗ್ರಾಮ ಪಂಚಾಯಿತಿಗಳಿವೆ ಅವುಗಳಲ್ಲಿ ಸದ್ಯ 33 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ. ಸದ್ಯ ನಾಮಪತ್ರ ಸಲ್ಲಿಕೆ ದಿನಾಂಕ ಮುಕ್ತಾಯವಾಗಿದ್ದು, ಒಟ್ಟು 491 ಸ್ಥಾನಗಳಿಗೆ 1630 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ ಡಿ.14ಕ್ಕೆ ನಾಮಪತ್ರಗಳನ್ನು ಹಿಂಪಡೆಯುವ ದಿನಾಂಕವಾಗಿದ್ದು, ಯಾರು ವಾಪಸ್ ತಗೆದುಕೊಳ್ಳುತ್ತಾರೆ ಅಥವಾ ಯಾರು ಕಣದಲ್ಲಿ ಉಳಿಯುತ್ತಾರೆ ಎಂಬದು ಇನ್ನೂ ಗೌಪ್ಯವಾಗಿದೆ.
ತಾಲೂಕಿನಲ್ಲಿ ಒಟ್ಟು 236 ಮತಗಟ್ಟೆಗಳು...
ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ತಾಲೂಕು ಆಡಳಿತ ಸಜ್ಜಾಗಿದ್ದು, ಮತದಾನಕ್ಕೆ ತಾಲೂಕಿನಲ್ಲಿ 236 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅವುಗಳಲ್ಲಿ 37 ಸೂಕ್ಷ್ಮ ಮತಗಟ್ಟೆಗಳಾಗಿದ್ದು, ಇನ್ನುಳಿದ 176 ಸಾಮಾನ್ಯ ಮತಗಟ್ಟೆಗಳಾಗಿವೆ.
ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು 1,57,164 ಮತದಾರರು ಈ ಬಾರಿ ಮತ ಚಲಾಯಿಸಲಿದ್ದಾರೆ. ಅವರಲ್ಲಿ 80,768 ಪುರುಷರು ಹಾಗೂ 76,386 ಮಹಿಳಾ ಮತದಾರರಿದ್ದಾರೆ ಎನ್ನಲಾಗಿದೆ.