ಹಾವೇರಿ: ನಗರದ ಜೆಪಿ ಸರ್ಕಲ್ ಬಳಿ ಇರುವ ನಗರಸಭೆಯ ವಾಣಿಜ್ಯ ಮಳಿಗೆಯಲ್ಲಿ ಸಾರ್ವಜನಿಕರಿಗೆ ಇಂದು ಕೊರೊನಾ ಪರೀಕ್ಷೆ ನಡೆಸಲಾಯಿತು.
ಇಂದು ನಗರದಲ್ಲಿ ಸಾರ್ವಜನಿಕರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅ್ಯಂಟಿಜಿನ್ ಟೆಸ್ಟ್ ಇಲ್ಲದ ಕಾರಣ ಗಂಟಲು ದ್ರವದ ಮಾದರಿಯನ್ನು ತಗೆದುಕೊಂಡು ಲ್ಯಾಬ್‌ಗೆ ಕಳುಹಿಸಲಾಯಿತು. ಇನ್ನು ಪರೀಕ್ಷೆಗೆ ಮಾಸ್ಕ್ ಧರಿಸದೆ ಬಂದ ವ್ಯಕ್ತಿಗಳಿಗೆ ದಂಡ ಹಾಕಲಾಯಿತು. ಸದ್ಯ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವುದರಿಂದ ಜಿಲ್ಲಾಡಳಿತ ನಿಟ್ಟುಸಿರು ಬಿಡುವಂತಾಗಿದೆ