ಹಾವೇರಿ: 4 ಸಾವಿರ ರೂಪಾಯಿ ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ ಬಿದ್ದಿದ್ದಾನೆ. ಜಿಲ್ಲೆಯ ರಟ್ಟಿಹಳ್ಳಿಯ ವಿಶ್ವನಾಥ್ ಉಚ್ಚಲದಡ್ಡಿ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿಯಾಗಿದ್ದಾನೆ.
ವೀರೇಶ ಬೆಣ್ಣಿ ಎಂಬುವರರ ಆಸ್ತಿ ಪೋಡಿ ಮಾಡಿಕೊಡಲು ವಿಶ್ವನಾಥ್ 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಗ್ರಾಮ ಲೆಕ್ಕಿಗರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ವಿಶ್ವನಾಥ್ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಹಾವೇರಿ ಎಸಿಬಿ ಡಿವೈಸ್ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಲಂಚಕ್ಕೆ ಬೇಡಿಕೆ ಇಟ್ಟ ಎಸ್ಡಿಎ ಅಧಿಕಾರಿ: ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ