ಹಾನಗಲ್: ಎತ್ತಿನ ಮೈ ತೊಳೆಯಲು ಹೋದ ಯುವಕ ಕೆರೆಯಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ನಡೆದಿದೆ.
ಆಕಾಶ ಶಾಡಗುಪ್ಪಿ (18) ಮೃತ ಯುವಕ. ಸಂಜೆ ವೇಳೆಗೆ ಗ್ರಾಮದ ಹೊರ ವಲಯದಲ್ಲಿರುವ ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ಘಟನೆ ಆಡೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.