ಹಾವೇರಿ: ಜಿಲ್ಲೆಯಲ್ಲಿ 3 ಕೊರೊನಾ ಪ್ರಕರಣಗಳು ದೃಢಪಡುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ತಾಲೂಕು ಕೇಂದ್ರ ಸಂಪರ್ಕಿಸುವ ರಸ್ತೆಗಳು ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ಬಿಗಿ ಬಂದೊಬಸ್ತ್ ಕೈಗೊಳ್ಳಲಾಗಿದೆ.
ನಗರಕ್ಕೆ ಬರುವ ಪ್ರತಿಯೊಂದು ವಾಹನಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಾಹನ ಎಲ್ಲಿಂದ ಬಂತು, ಎಲ್ಲಿಗೆ ಹೋಗುತ್ತಿದೆ ಸೇರಿದಂತೆ ವಿವಿಧ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ.
ಅಲ್ಲದೆ ಬೈಕ್ ಮತ್ತು ಕಾರ್‌ಗಳಲ್ಲಿ ಸಮಾಜಿಕ ಅಂತರವಿದೆಯಾ ಎಂಬುದನ್ನ ಸಹ ಚೆಕ್ ಮಾಡಲಾಗುತ್ತಿದೆ. ಮಾಸ್ಕ್ ಹಾಕದೇ ಸಂಚರಿಸಿದರೆ ದಂಡ ವಿಧಿಸಲಾಗುತ್ತಿದೆ.