ಹಾವೇರಿ/ದಾವಣಗೆರೆ: ಶುಕ್ರವಾರ ಕೊರೊನಾ ಕೋವ್ಯಾಕ್ಸಿನ್ ಡ್ರೈ ರನ್ ನಡೆಸಲು ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗ ಸಕಲ ಸಿದ್ಧತೆ ಮಾಡಿಕೊಂಡಿವೆ.
ಹಾವೇರಿ ಜಿಲ್ಲೆಯ ಸರ್ಕಾರಿ ಖಾಸಗಿ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಡ್ರೈ ರನ್ ಅಣಕು ಪ್ರದರ್ಶನದ ಕೇಂದ್ರ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟು 92 ಕೇಂದ್ರದಲ್ಲಿ ವ್ಯಾಕ್ಸಿನ್ ನೀಡಲು ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ್ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆ, ಬ್ಯಾಡಗಿ ತಾಲೂಕಾಸ್ಪತ್ರೆ, ಬಂಕಾಪುರ ಸಮುದಾಯ ಆರೋಗ್ಯ ಭವನ ಸವಣೂರು ಮತ್ತು ಕಬ್ಬೂರು ಪ್ರಾಥಮಿಕ ಆಸ್ಪತ್ರೆಗಳಲ್ಲಿ ಅಣಕು ಪ್ರದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸುಮಾರು 6,700 ಕೊರೊನಾ ವಾರಿಯರ್ಸ್ಗೆ ವ್ಯಾಕ್ಸಿನ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಡ್ರೈರನ್ ಯಶಸ್ವಿಯಾದರೆ ಮುಂದಿನ ಕೆಲ ದಿನಗಳಲ್ಲಿ ವ್ಯಾಕ್ಸಿನೇಶನ್ ನಡೆಯಲಿದೆ ಎಂದು ತಿಳಿಸಿದರು.
ದಾವಣಗೆರೆಯಲ್ಲಿ ಡ್ರೈ ರನ್ ಮಾಡಲು ಸರ್ಕಾರ ಆರು ಕಡೆ ಸ್ಥಳ ನಿಗದಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಅದರಂತೆ ಈಗಾಗಲೇ ದಾವಣಗೆರೆ ಜಿಲ್ಲೆಯ ಚಿಗಟೇರಿ ಆಸ್ಪತ್ರೆ, ಎಸ್ಎಸ್ ಆಸ್ಪತ್ರೆ, ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆ, ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಂಡಜ್ಜಿ ಹಾಗು ನಗರ ಆರೋಗ್ಯ ಕೇಂದ್ರ ಬಾಷಾ ನಗರದಲ್ಲಿ ಡ್ರೈ ರನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ
ಡ್ರೈ ರನ್ ಕೇಂದ್ರಗಳಿಗೆ ಭೇಟಿ ನೀಡುವ ಎಲ್ಲಾ ಸಿಬ್ಬಂದಿಗೆ ತರಬೇತಿ ನೀಡಿದ್ದೇವೆ, ತರಬೇತಿ ನೀಡಿರುವ ಸಿಬ್ಬಂದಿಗಳ ಮೇಲೆ ಓರ್ವ ಸೂಪರ್ವೈಸರ್ ಅನ್ನು ಕೂಡ ನೇಮಕ ಮಾಡಿದ್ದೇವೆ. 11,115 ಜನರನ್ನು ಕೊ ವ್ಯಾಕ್ಸಿನೈಟ್ ಮಾಡುತ್ತೇವೆ ಎಂದು ಹೇಳಲಾಗಿತ್ತು, ಅದರ ಬದಲಾಗಿ 17,000 ಜನರಿಗೆ ಮಾಡಲಿದ್ದೇವೆ ಎಂದು ತಿಳಿಸಿದರು.