ಹಾವೇರಿ: ಹತ್ತಿ ತುಂಬಿದ್ದ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರಗೆ ಬೆಂಕಿ ಹತ್ತಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ನಗರದ ಜಿಲ್ಲಾಸ್ಪತ್ರೆಯ ಬಳಿ ಈ ಘಟನೆ ಸಂಭವಿಸಿದೆ. ಆದರೆ, ಸ್ಥಳೀಯರ ಮತ್ತು ಅಗ್ನಿಶಾಮಕದಳದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಳ್ಳುವಷ್ಟರಲ್ಲಿ ಸ್ಥಳೀಯರು ಮತ್ತು ಅಗ್ನಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಟ್ರಾಕ್ಟರ್ನಲ್ಲಿ ರೈತರು ಹತ್ತಿಯನ್ನು ಮಾರಾಟಕ್ಕೆ ಎಂದು ಒಯ್ಯುತ್ತಿದ್ದರು ಎನ್ನಲಾಗಿದೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.