ಹಾವೇರಿ: ಲಾಕ್ಡೌನ್ ಸಡಿಲಿಕೆಯ ನಂತರ ಜಿಲ್ಲೆಯಲ್ಲಿ ಬಸ್ ಸೇವೆ ಆರಂಭಗೊಂಡಿದ್ದು ಪ್ರಯಾಣಿಕರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲ ದಿನ ನಿರೀಕ್ಷಿಸಿದ ಪ್ರಮಾಣದಲ್ಲಿ ಪ್ರಯಾಣಿಕರು ಬಂದಿರಲಿಲ್ಲ. ಆದರೆ, ಮೂರನೇ ದಿನವಾದ ಇಂದು ಪ್ರಯಾಣಿಕರ ಪ್ರಮಾಣ ಹೆಚ್ಚಾಗಿತ್ತು.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆ ಒಂದು ಬಸ್ನಲ್ಲಿ 21 ಜನ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ಬಸ್ ಹತ್ತುವ ಮುನ್ನ ಪ್ರಯಾಣಿಕರು ಕಡ್ಡಾಯವಾಗಿ ಸ್ಯಾನಿಟೈಜರ್ ಬಳಸುತ್ತಿದ್ದಾರೆ. ಬಸ್ಗಳಲ್ಲಿ ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿರುವುದಕ್ಕೆ ಸಾರಿಗೆ ಸಿಬ್ಬಂದಿಯಲ್ಲಿ ಖುಷಿ ತಂದಿದೆ.