ಹಾವೇರಿ/ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿ ಸಾರಿಗೆ ನೌಕರರು ವಿಭಿನ್ನವಾಗಿ ಪ್ರತಿಭಟನೆ ಮಾಡಿದರು.
ಆರನೇ ವೇತನ ಆಯೋಗ ಜಾರಿ, ಆರೋಗ್ಯ ಭಾಗ್ಯ ವಿಮಾ ಯೋಜನೆ, ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದರು. ಇದೇ ವೇಳೆ, ಹಾವೇರಿಯ ರಾಣೆಬೆನ್ನೂರ ಹಾಗೂ ಹುಬ್ಬಳ್ಳಿಯಲ್ಲಿ ಬೋಂಡಾ, ಭಜ್ಜಿ, ಟೀ ಮಾರಿದ ನೌಕರರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದ್ರೆ ಇಲ್ಲಿಯವರೆಗೂ ಪೂರೈಸಿಲ್ಲ. ಹಾಗಾಗಿ ಹುಬ್ಬಳ್ಳಿಯಲ್ಲಿ ಏ. 7ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.