ರಾಣೆಬೆನ್ನೂರು (ಹಾವೇರಿ): ಪೊಲೀಸರಿಗೆ ಬರೆದ ಅನಾಮಧೇಯ ಪತ್ರದಿಂದ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಕಳೆದ 4 ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ 25 ವರ್ಷದ ಗೃಹಿಣಿಯ ಪ್ರಕರಣ ಈಗ ಅನಾಮಧೇಯ ಪತ್ರದ ಮೂಲಕ ಕೊಲೆ ಪ್ರಕರಣವಾಗಿ ತಿರುವು ಪಡೆದಿದೆ.
ಏನಿದು ಪ್ರಕರಣ?
ಜುಲೈ 15, 2020ರಂದು ನಗರದ ಗೌಳಿ ಗಲ್ಲಿಯಲ್ಲಿ ತನ್ನ ಪತಿಯ ಮನೆಯಲ್ಲಿ ಮಹಿಳೆಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಪತಿಯ ಮನೆಯವರು ಹಾಗೂ ಮಹಿಳೆಯ ಕುಟುಂಬಸ್ಥರು ಆಕೆ ವೈಯಕ್ತಿಕ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಹರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು.
ಅಲ್ಲದೇ ಹುಡುಗನಿಗೆ ನೀಡಿದ್ದ ಹಣ ಮತ್ತು ಚಿನ್ನಾಭರಣ ವಾಪಸ್ ನೀಡುವಂತೆಯೂ ಮಾತಾಗಿತ್ತು ಎನ್ನಲಾಗಿದೆ. ಈ ಪ್ರಕರಣ ಸಂಬಂಧ ಪೊಲೀಸರಿಗೆ ಅನಾಮಧೇಯ ಪತ್ರವೊಂದು ಬಂದಿದ್ದು, ಪತ್ರದಲ್ಲಿ ಗೃಹಿಣಿ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸದ್ಯ ರಾಣೇಬೆನ್ನೂರು ಶಹರ ಠಾಣೆ ಪೊಲೀಸರು ಪತಿ ನಿರಂಜನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ತನಿಖೆ ಆರಂಭಿಸಿದ್ದಾರೆ. ಗೃಹಿಣಿಯ ಫೀಮರ್ (ಅಸ್ತಿ) ತೆಗೆದು ವಿಧಿವಿಜ್ಞಾನ ಸಂಸ್ಥೆಗೆ ಕಳುಹಿಸಬೇಕಿದೆ.