ETV Bharat / state

ಹೆದ್ದಾರಿ ಪಕ್ಕದಲ್ಲಿ ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸಾವು - ಹಾವೇರಿ

Haveri Accident: ಹಾವೇರಿ ಜಿಲ್ಲೆ‌ಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

Haveri Accident
ಹೆದ್ದಾರಿ ಪಕ್ಕದಲ್ಲಿ ನಿಂತಿದ್ದವರಿಗೆ ಕಾರು ಡಿಕ್ಕಿ
author img

By

Published : Aug 7, 2023, 11:03 AM IST

ಹಾವೇರಿ: ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆ‌ಯ ಶಿಗ್ಗಾಂವಿ ತಾಲೂಕಿನ ನೀರಲಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಊರಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದ ವೇಳೆ ವ್ಯಕ್ತಿಗಳ ಮೇಲೆ ಕಾರು ಹರಿದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತರನ್ನು ವಿರೂಪಾಕ್ಷಪ್ಪ ಕಾಳಿ ಮತ್ತು ಚಿದಾನಂದ ಕುರುಬರ ಎಂದು ಗುರುತಿಸಲಾಗಿದೆ.

ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೊರಟ್ಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಏಕಾಏಕಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಿರೂಪಾಕ್ಷಪ್ಪ ಸಾವನ್ನಪ್ಪಿದ್ದಾನೆ. ಇನ್ನೋರ್ವ ವ್ಯಕ್ತಿ ಚಿದಾನಂದ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಹೆದ್ದಾರಿ ತಡೆದು ಪ್ರತಿಭಟನೆ: ಈ ಮಧ್ಯೆ ಅಪಘಾತ ನಡೆದು ಬಹಳ ಸಮಯವಾದರೂ ಆ್ಯಂಬುಲೆನ್ಸ್​ ಬಾರದ ಹಿನ್ನೆಲೆ ಚಿದಾನಂದ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದಿದ್ದಕ್ಕೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಧಾವಿಸಿದ ತಡಸ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದರು. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನಾಗಮಂಗಲ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ದುರ್ಮರಣ

ಬೈಕ್​ಗಳಿಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದ ಕಾರು: ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗ್ರಾಮದ ಬಳಿ ಇತ್ತೀಚೆಗೆ ಸಂಭವಿಸಿತ್ತು.

ದೇವನಹಳ್ಳಿಯ ರಾಜೇಶ್ ಎಂಬುವರು ಹೊಸಕೋಟೆಯ ದೇವಸ್ಥಾನದಿಂದ ವಾಪಸ್​​ ಬರುತ್ತಿದ್ದಾಗ ಕಾರು ನೋಡ ನೋಡುತ್ತಿದ್ದಂತೆ ರಸ್ತೆ ಪಕ್ಕದಲ್ಲಿದ್ದ ಬೈಕ್​​ಗಳಿಗೆ ಡಿಕ್ಕಿ ಹೊಡೆದಿತ್ತು. ಬೈಕ್ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದವರು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದರು. ಕಾರು ಅಪಘಾತದ ದೃಶ್ಯವು ಪಕ್ಕದಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ವೇಗವಾಗಿ ಬಂದ ಕಾರು ರಸ್ತೆ ಪಕ್ಕದ ಬೈಕ್​ಗಳಿಗೆ ರಭಸವಾಗಿ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಗುದ್ದಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಏರ್ ಬ್ಯಾಗ್​ನಿಂದಾಗಿ ಅಪಾಯದಿಂದ ಬಚಾವ್​ ಆಗಿದ್ದರು. ಅಪಘಾತದಲ್ಲಿ ಕಾರು ಹಾಗೂ ಎರಡು ಬೈಕ್​ಗಳು ಜಖಂಗೊಂಡಿದ್ದವು. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹೊಸಕೋಟೆ: ಬೈಕ್​ಗಳಿಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದ ಕಾರು.. ಸಿಸಿಟಿವಿ ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.