ಹಾನಗಲ್ : ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮೂಡೂರು ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆದರೆ, ಕಾರ್ಯಾಚರಣೆ ವೇಳೆ ಇನ್ನೂ 8 ಮಂದಿ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ರಾಮು ಅಂಟಗಣಿ (30) ಮತ್ತು ಪ್ರಭು ಚಿಕ್ಕಾಂಶಿ (21) ಎಂಬುವರು ಬಂಧಿತರು. ಇವರಿಂದ ಜಿಂಕೆ ಮತ್ತು ಕಾಡುಹಂದಿ ಮಾಂಸದ ಜೊತೆಗೆ ಐದು ಬೈಕ್ ಹಾಗೂ ಬೇಟೆಯಾಡಲು ಬಳಸಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಹಾನಗಲ್ ವಲಯ ಅರಣ್ಯ ಇಲಾಖೆ ಅಧಿಕಾರಿ ಪರಮೇಶಪ್ಪ ಪೇಲನವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.