ETV Bharat / state

ಹಾವೇರಿಯಲ್ಲಿ ಸೇತುವೆ ಮೇಲಿಂದ ಕೆಳಗೆ ಬಿದ್ದ ವಿಆರ್​ಎಲ್​ ಬಸ್​...ಇಬ್ಬರ ಸಾವು, 15 ಜನರಿಗೆ ಗಾಯ! - ಹಾವೇರಿಯಲ್ಲಿ ರಸ್ತೆ ಅಪಘಾತ

ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

passenger died in bus accident at Haveri, bus overturns in Haveri, Road accident in Haveri, Haveri news, ಹಾವೇರಿಯಲ್ಲಿ ಬಸ್​ ಅಪಘಾತದಲ್ಲಿ ಪ್ರಯಾಣಿಕರು ಸಾವು, ಹಾವೇರಿಲ್ಲಿ ಬಸ್​ ಪಲ್ಟಿ, ಹಾವೇರಿಯಲ್ಲಿ ರಸ್ತೆ ಅಪಘಾತ, ಹಾವೇರಿ ಸುದ್ದಿ,
ಹಾವೇರಿಯಲ್ಲಿ ಸೇತುವೆ ಮೇಲಿಂದ ಕೆಳಗೆ ಬಿದ್ದ ವಿಆರ್​ಎಲ್​ ಬಸ್
author img

By

Published : Feb 12, 2022, 7:36 AM IST

Updated : Feb 12, 2022, 7:54 AM IST

ಹಾವೇರಿ: ಬಸ್​ವೊಂದು ಪಲ್ಟಿಯಾಗಿ ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಬಿದ್ದ ಕಾರಣ ಇಬ್ಬರು ಸಾವನ್ನಪ್ಪಿರುವ ಘಟನೆ ದೇವಗಿರಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಹಾವೇರಿಯಲ್ಲಿ ಸೇತುವೆ ಮೇಲಿಂದ ಕೆಳಗೆ ಬಿದ್ದ ವಿಆರ್​ಎಲ್​ ಬಸ್

ಬೆಂಗಳೂರಿನಿಂದ ಗೋಕಾಕ್​​ಗೆ ಸಂಚರಿಸುತ್ತಿದ್ದ ವಿಆರ್​ಎಲ್​ ಬಸ್ ಪಲ್ಟಿಯಾಗಿದ್ದು, ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಭವಿಸಿದ ಅಪಘಾತದಲ್ಲಿ ಹದಿನೈದು ಜನರಿಗೆ ಗಾಯಗಳಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: 'ಮುಕ್ತವಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ನೀಡಿ': ಲೋಕಸಭೆಯಲ್ಲಿ ಸಂಸದೆ ಸುಮಲತಾ ಕಿಡಿ

ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಬಳಿಯ ಪೂನಾ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ವಿಆರ್​ಎಲ್​ ಬಸ್​ ಸಂಚರಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಪಲ್ಟಿಯಾಗಿ ಸರ್ವೀಸ್​ ರಸ್ತೆಗೆ ಬಿದ್ದಿದೆ. ಭಯಂಕರ ಶಬ್ದ ಕೇಳಿದ ಸ್ಥಳೀಯರು ಕೂಡಲೇ ಸಹಾಯಕ್ಕೆ ದೌಡಾಯಿಸಿ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯಕ್ಕೆ ಕೈ ಹಾಕಿದರು.

ಸುದ್ದಿ ತಿಳಿದಾಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರೊಂದಿಗೆ ಕೈ ಜೋಡಿಸಿ ರಕ್ಷಣಾ ಕಾರ್ಯ ಮುಂದುವರಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಅಗ್ನಿಶಾಮಕ ದಳ ಕ್ರೇನ್​ನ ಸಹಾಯದಿಂದ ಬಸ್ ಮೇಲೆತ್ತಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

ಓದಿ: 590 ಪ್ಲೇಯರ್ಸ್​, 561. 5ಕೋಟಿ ರೂ... IPL ಮೆಗಾ ಹರಾಜು ಬಗ್ಗೆ ಕ್ರಿಕೆಟ್ ಪ್ರೇಮಿಗಳು ತಿಳಿದುಕೊಳ್ಳಬೇಕಾಗಿದ್ದೇನು!?

ಸ್ಥಳಕ್ಕೆ ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ನಾಗಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Last Updated : Feb 12, 2022, 7:54 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.