ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಶಾಲೆ ಆರಂಭವಾದ ನಂತರ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದು ವರದಿಯಾಗಿದೆ. ಚಿಕ್ಕ ಕುರವತ್ತಿ ಸರ್ಕಾರಿ ಮತ್ತು ರಾಣೆಬೆನ್ನೂರಿನ ಖಾಸಗಿ ಶಾಲೆಯ ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದನ್ನೂ ಓದಿ: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬಿಎಸ್ವೈ
ಈ ಕುರಿತಂತೆ ಮಾಹಿತಿ ನೀಡಿರುವ ಡಿಡಿಪಿಐ ಅಂದಾನೆಪ್ಪ ವಡಗೇರಿ, ಸೋಂಕಿಗೆ ಒಳಗಾಗಿರುವ ಇಬ್ಬರು ಶಿಕ್ಷಕರನ್ನ ಹೋಂ ಐಸೋಲೇಷನ್‌ನಲ್ಲಿರಿಸಲಾಗಿದೆ. ಜಿಲ್ಲೆಯಲ್ಲಿರುವ ಸುಮಾರು 6 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಕೊರೊನಾ ಶಿಕ್ಷಕರಿರುವ ಶಾಲೆಯ 23 ವಿದ್ಯಾರ್ಥಿಗಳ ಗಂಟಲು ದ್ರವವನ್ನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.